ನಂಜನಗೂಡಿನಲ್ಲಿ 1.62 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ
1 min readನಂಜನಗೂಡಿನಲ್ಲಿ 1.62 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಶಂಕುಸ್ಥಾಪನೆ
ನ0ಜನಗೂಡು ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 1.62 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಇಂದು ಗುದ್ದಲಿಪೂಜೆ ನೇರವೇರಿಸಿದರು.
ನಂಜನಗೂಡು ನಗರ ಸಭೆಯ ದೇವಿರಮ್ಮನಹಳ್ಳಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ನವೀಕರಿಸುವ ಕಾಮಗಾರಿ, ವಿ.ಎ ಬಡಾವಣೆಯಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿ, ವೀರಭದ್ರಪ್ಪ ಲೇಔಟ್‌ನಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿ, ರಾಮಸ್ವಾಮಿ ಬಡಾವಣೆಯಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ಡಾಂಬರೀಕರಣ, ನಗರ ಸಭೆಯ ವಾರ್ಡ್ ನಂಬರ್ 21ರ ಪಿಟಿ ಬಡಾವಣೆಯಲ್ಲಿ ಸಿಸಿ ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿ, ಚಿದಂಬರ ಬಡಾವಣೆಯಲ್ಲಿ ಪೈಪ್ ಲೈನ್ ಅಳವಡಿಸುವ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ನಂಜನಗೂಡು ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಂಗನವಾಡಿ ಕಟ್ಟಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಮತ್ತು ಶೌಚಾಲಯ ಸೇರಿದಂತೆ ವಿವಿಧ ಕಟ್ಟಡಗಳನ್ನು ಉದ್ಘಾಟನೆ ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಕಳೆದ ಒಂದು ವಾರದಿಂದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು, ಸುಮಾರು 9.37 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಕ್ಷೇತ್ರದ ಮತದಾರರು ಮತ್ತಷ್ಟು ಸಮಯವನ್ನು ಕೊಟ್ಟರೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ನಗರಸಭಾ ಪೌರಯುಕ್ತ ನಂಜು0ಡಸ್ವಾಮಿ, ನಗರಸಭಾ ಸದಸ್ಯ ಮಹೇಶ್ ಇದ್ದರು.