174 ರನ್ ಸಿಡಿಸಿ ದ್ರಾವಿಡ್, ಎಬಿಡಿ, ಗಿಲ್ ಕ್ರಿಸ್ಟ್ ದಾಖಲೆ ಮುರಿದ ಕ್ವಿಂಟನ್ ಡಿಕಾಕ್!
1 min read2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸ್ಫೋಟಕ ಫಾರ್ಮ್ ನಲ್ಲಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ , ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ 174 ರನ್ ಸಿಡಿಸಿ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ. ಟೂರ್ನಿಯಲ್ಲಿ 3 ಶತಕ ಬಾರಿಸಿರುವ ಡಿಕಾಕ್, ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಅತಿ ಹೆಚ್ಚು ವೈಯಕ್ತಿಕ ಗರಿಷ್ಠ ಸ್ಕೋರ್ ಗಳಿಸಿದ ವಿಕೆಟ್ ಕೀಪರ್ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ. ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.
ಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ವಾಂಖೆಡೆ ಕ್ರೀಡಾಂಗಣದಲ್ಲಿ ಆಡಿದ ಅನುಭವವನ್ನು ಬಳಸಿಕೊಂಡು ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟರ್, ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ಮಂಗಳವಾರ (ಅಕ್ಟೋಬರ್ 24) ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಟೂರ್ನಿಯ 23ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ 174 ರನ್ ಬಾರಿಸಿ ತಮ್ಮ ಹೆಸರನ್ನು ಕ್ರಿಕೆಟ್ ನ ಇತಿಹಾಸ ಪುಟದಲ್ಲಿ ದಾಖಲಿಸಿದ್ದಾರೆ.