ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಬಾಗೇಪಲ್ಲಿಯಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

1 min read

ಬಾಗೇಪಲ್ಲಿಯಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ರೈತರ ಸಮಸ್ಯೆ ಪರಿಹಾರಕ್ಕೆ ಸಹಕಾರ ಕ್ಷೇತ್ರ ನೆರವಾಗಬೇಕು

ಸಹಕಾರ ತತ್ವ ಆಚರಣೆಯಲ್ಲಿ ಅಪಾರ ವಿಶ್ವಾಸ ಹೊಂದಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂ ಅವರು ಸಹಕಾರ ತತ್ವದ ಮೂಲಕ ರಾಷ್ಟçದ ಭವಿಷ್ಯ ನಿರ್ಧರಿಸಬಹು ಎಂಬ ಆಶಯದೊಂದಿಗೆ ಹಲವು ಯೋಜನೆಗಳನ್ನು ರೂಪಿಸಿದರು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ವಿ. ನಾಗರಾಜು ಹೇಳಿದರು

ವಿಶ್ವದಲ್ಲಿ ಅತ್ಯುತ್ತಮ ಸಹಕಾರ ಚಳುವಳಿಯನ್ನು ಭಾರತ ಹೊಂದಿದೆ. ಪ್ರತಿ ವರ್ಷ ನವೆಂಬರ್ 14ರಿಂದ 20 ರವರೆಗೆ ರಾಷ್ಟçದಾದ್ಯಂತ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯುತ್ತದೆ, ಪಂಡಿತ್ ನೆಹರೂ ಅವರ ಜನ್ಮ ದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ನಡೆಯುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ನಾಗರಾಜು ಹೇಳಿದರು. ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗಿರಿಜಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳು ವ್ಯವಸಾಯ ಕ್ಷೇತ್ರದ ಅಭಿವದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕು. ಸರಕಾರಗಳು ನೂರಾರು ರೈತ ಪರ ಯೋಜನೆಗಳನ್ನು ಜಾರಿಗೆ ತಂದರೂ, ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಿಲ್ಲ. ರೈತರ ಅಭಿವದ್ಧಿಗೆ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕಿದೆ. ವ್ಯವಸಾಯ ಬಿಟ್ಟು ನಗರಗಳಿಗೆ ವಲಸೆ ಹೆಚ್ಚುತ್ತಿದೆ. ರೆತರ ಸಮಸ್ಯೆಗಳನ್ನು ಪರಿಹರಿಸಲು ಸಹಕಾರ ಸಂಘಗಳು ಶ್ರಮಿಸಬೇಕು. ಆಹಾರ ಮತ್ತು ಆರ್ಥಿಕ ಸ್ವಾವಲಂಬನೆ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂದರು.

ಕೋಚಿಮುಲ್ ಮಾಜಿ ಅಧ್ಯಕ್ಷ ವಿ.ಮಂಜುನಾಥ ರೆಡ್ಡಿ ಮಾತನಾಡಿ, ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ ರೈತರ ಅಭಿವದ್ಧಿ ಸಾಧ್ಯ. ಸಂಘಗಳಲ್ಲಿ ರಾಜಕೀಯ ಬೆರೆಸುವ ಬದಲು ರಾಜಕೀಯ ಮುಕ್ತವಾಗಿ ಸಹಕಾರ ಸಂಘಗಳ ಏಳಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಸಹಕಾರ ಹಾಗೂ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ವಿಶಿಷ್ಟ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಮಲಕಚರವು ಪಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡಕ್ಕೆ 2.5 ಲಕ್ಷ ರೂಪಾಯಿಗಳ ಚೆಕ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಮರ್, ಕೆ.ಎನ್. ಲಕ್ಷ್ಮೀಪತಿ, ಪ್ರಭಾಕರ್ ರೆಡ್ಡಿ, ಚಂದ್ರಶೇಖರ ರೆಡ್ಡಿ, ಲಕ್ಷಿದೇವಮ್ಮ, ಶಂಕರ್, ಶ್ರೀನಿವಾಸ್ ಗೌಡ, ವೇಣು, ಪ್ರೇಮ್ ಕುಮಾರ್ ಇದ್ದರು.

About The Author

Leave a Reply

Your email address will not be published. Required fields are marked *