ಶಿಡ್ಲಘಟ್ಟದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
1 min readಶಿಡ್ಲಘಟ್ಟದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಬೆರಿಸಬೇಡಿ
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸಹಕಾರಿ ವ್ಯವಸ್ಥೆ ಬಲಪಡಿಸಲು ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸೊಸೈಟಿಗಳನ್ನು ಸ್ಥಾಪಿಸಿದ್ದು, ಅವುಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಪಕ್ಷಾತೀತವಾಗಿ ಶ್ರಮಿಸಬೇಕೆಂದು ಕೆಎಂಎ ನಿರ್ದೇಶಕ ಶ್ರೀನಿವಾಸ್ ರಾಮಯ್ಯ ಹೇಳಿದರು.
ಶಿಡ್ಲಘಟ್ಟ ನಗರದ ಕೋಚಿಂಗ್ ಶಿಬಿರದ ಕಚೇರಿಯಲ್ಲಿ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಕೆಎಂಎ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಮತ ಬ್ಯಾಂಕ್ ರಾಜಕಾರಣ ಮಾಡಲು ಸಹಕಾರಿ ವ್ಯವಸ್ಥೆ ನಾಶಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇದು ಗಂಭೀರ ವಿಚಾರ, ಸಹಕಾರಿ ವ್ಯವಸ್ಥೆ ಮೂಲಕ ಅನೇಕ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು, ಎಲ್ಲಾ ಸಹಕಾರಿ ಸಂಸ್ಥೆ ರಾಜಕೀಯ ಬಿಟ್ಟು ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಸ್ಥೆಗಳನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಭೀಮೇಶ್ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ ಸಹಕಾರ ಸಂಘದ ಪಾತ್ರವಿದೆ ರೈತರು ರಾಷ್ಟಿಕೃತ ಬ್ಯಾಂಕ್ ಗಳಿಗಿಂತ ಸಹಕಾರಿ ಬ್ಯಾಂಕುಗಳಲ್ಲಿ ಹಣ ಇರಿಸಿ ರೈತರ ಸಹಕಾರ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕು ಸಹಕಾರ ಸಂಘ ಸಂಸ್ಥೆಗಳ ಮೂಲಕ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಬೇರೆಯವರಿಗೆ ಸಾಲ ಸೌಲಭ್ಯ ನೀಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಸಾಭಾಕರಿಗೆ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಜಿಲ್ಲಾ ಸಹಕಾರಿ ,ಉಪಾಧ್ಯಕ್ಷ ಲಕ್ಷ್ಮೀಪತಿ, ನಿರ್ದೇಶಕ ಟಿ,ಎಂ, ಪ್ರಧಾರ್ಕ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ನಿರ್ದೇಶಕರು ನಿರಂಜನ್ ಇದ್ದರು.