ಶಾಸಕರು, ಸಂಸದರು, ರೈತರ ಮುಖಮುಖಿ
ವಿನೂತನ ಕಾರ್ಯಕ್ರಮಕ್ಕೆ ಮುಂದಾದ ರೈತರು
ನಂಜನಗೂಡಿನ ರೈತರಿಂದ ಹೊಸ ಪ್ರಯೋಗ
ಶಾಸಕರು ಮತ್ತು ರೈತರ ಮುಖಮುಖಿ ಕಾರ್ಯಕ್ರಮಕ್ಕೆ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಜ್ಜಾಗಿದೆ.
ನಂಜನಗೂಡು ನಗರದ ಎಪಿಎಂಸಿ ಆವರಣದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿ ರಾಜ್ಯ ಮುಖಂಡ ಪಚ್ಚೆ ನಂಜುAಡಸ್ವಾಮಿ, ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಕ್ಷೇತ್ರದ ನಂಜನಗೂಡಿನ ತಾಂಡವಪುರ ಗ್ರಾಮದಲ್ಲಿ ಜ. ೨೩ ರಂದು ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಎಂಬ ವಿನೂತನ ಕಾರ್ಯಕ್ರಮಕ್ಕೆ ರೈತ ಸಂಘಟನೆ ಮುಂದಾಗಿದ್ದು, ಅಂದು ಸುಮಾರು ೫ ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ಹಾಗೂ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ವರುಣ ಕ್ಷೇತ್ರದ ಡಾ. ಯತೀಂದ್ರ ಸಿದ್ದರಾಮಯ್ಯ, ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಸುತ್ತಮುತ್ತಲಿನ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳೊಂದಿಗೆ ರೈತರ ಸಭೆ ಆಯೋಜನೆ ಮಾಡಲಾಗಿದೆ.
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಹಕ್ಕೊತ್ತಾಯ ಮಂಡನೆ. ಕಬ್ಬಿಗೆ ಬೆಂಬಲ ಬೆಲೆ ನಿಗಧಿ ಪಡಿಸಬೇಕು, ಬಗರ್ ಹುಕುಂ ಸಾಗುವಳಿ, ದುರಸ್ತಿ ಕಾರ್ಯ, ರೈತರ ಸಾಲ, ವಕ್ಫ್ ಬೋರ್ಡ್ ವಿಚಾರ ಸೇರಿದಂತೆ ರೈತರ ಸಮಸ್ಯೆಗಳನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆ ರೈತರು ಮುಖಾಮುಖಿಯಾಗಿ ಚರ್ಚಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರೈತ ಮುಖಂಡ ಪಚ್ಚೆ ನಂಜುAಡಸ್ವಾಮಿ, ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಶೈಲಜಾ, ಶಂಕರನಾಯಕ, ಮೋಹನ್, ಉಪ್ಪನಹಳ್ಳಿ ದೇವರಾಜ್, ಹಂಬಳೆ ರವಿ ಸೇರಿದಂತೆ ಹಲವರು ರೈತರು ಭಾಗವಹಿಸಿದ್ದರು.
.