ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಬರ್ಬರ ಹತ್ಯೆ!
1 min readಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿ ಬರ್ಬರ ಕೊಲೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಮನೆಗೆ ನುಗ್ಗಿ ಕೊಲೆಗೈದ ಹಂತಕರು.
ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (37) ಕೊಲೆಯಾದವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪತಿಯಿಂದ ದೂರವಾಗಿದ್ದ ಪ್ರತಿಮಾ ಒಬ್ಬಂಟಿಯಾಗಿ ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಮನೆಗೆ ಪ್ರತಿಮಾ ಅವರನ್ನು ಕಾರು ಚಾಲಕ ಡ್ರಾಪ್ ಮಾಡಿ ತೆರಳಿದ್ದ. ಬಳಿಕ ರಾತ್ರಿ ವೇಳೆ ಹಂತಕರು ಬಂದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮನೆಯೊಳಗೆ ಬಂದು ಕೊಲೆ ಮಾಡಿ ಹೋಗಿರುವುದರಿಂದ ಪೂರ್ವನಿಯೋಜಿತ ಕೃತ್ಯವೆಂದು ಶಂಕಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ರಾತ್ರಿ ಪ್ರತಿಮಾರಿಗೆ ಅವರ ಸಹೋದರ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆಯಲ್ಲಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಪುರವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.