ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
1 min readಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.
ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮನನೊಂದ ಬಾಲಕಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ತಂದೆ ದೂರು ನೀಡಿದ್ದರು.
2020ರಲ್ಲಿ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ನ್ಯಾಯಾಧೀಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಆರು ತಿಂಗಳು ಸಾದಾ ಜೈಲು ಶಿಕ್ಷೆ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತಾ ವಾದ ಮಂಡಿಸಿದ್ದರು.