ಬೆಂಗಳೂರಿಗೆ ವರ್ಷಕ್ಕೆ ’24 TMC’ ನೀರು ಮೀಸಲೀಡಲು ‘ಸುಪ್ರೀಂ’ ಆದೇಶ : ಡಿಸಿಎಂ ಡಿಕೆ ಶಿವಕುಮಾರ್
1 min readಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರ ಜೊತೆ ಚರ್ಚೆ ನಡೆಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿಗೆ ಪ್ರತಿ ವರ್ಷ 24 ಟಿಎಂಸಿ ನೀರನ್ನು ಮೀಸಲೀಡಲು ಸುಪ್ರೀಂ ಆದೇಶಿಸಿದೆ ಎಂದು ತಿಳಿಸಿದರು.
ಮೇಕೆದಾಟು ವಿಚಾರವನ್ನು ಸಿಡಬ್ಲ್ಯೂಎಂಎ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಆದೇಶದಂತೆ ಬೆಂಗಳೂರಿಗೆ 24 TMC ನೀರು ಮೀಸಲಿಡಲು ಅದೇಶಿಸಿದೆ. ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿರಬೇಕೆಂದು ಸುಪ್ರೀಂ ಆದೇಶ ಹೊರಡಿಸಿದೆ.
ಪ್ರತಿ ವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಸುಪ್ರೀಂ ಅನುಮತಿ ಪಡೆದು 24 ಟಿಎಂಸಿ ನೀರನ್ನು ಬೆಂಗಳೂರಿಗೆ ಮೀಸಲಿಟ್ಟಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ಬಗ್ಗೆ ಸಭೆ ಆರಂಭವಾಗಲಿದೆ ಎಂದು ನವದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬಿಜೆಪಿಯಿಂದ ಮತ್ತೆ ಆಪಲ್ ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಶಾಸಕರನ್ನು ಕರೆದುಕೊಳ್ಳಕ್ಕೆ ಆಗುವುದಿಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆ ಇನ್ನೂ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಅವರಲ್ಲೆ ಸಾಕಷ್ಟು ಸಮಸ್ಯೆಗಳಿವೆ ಎಂದರು.
ಮಾರ್ಕೆಟ್ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಭೆ ಆಗಿರುವ ಬಗ್ಗೆ ನಾನು ಮಾತನಾಡುವುದಿಲ್ಲ ಬಿಜೆಪಿ ಅವರೆಲ್ಲ ಮೂವಮೆಂಟ್ಗಳು ನನಗೆ ಗೊತ್ತಿದೆ ಎಂದು ದೆಹಲಿಯಲ್ಲಿ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.