ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!

1 min read

ರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್​ ಆದೇಶ ಹೊರಡಿಸಿದೆ.

ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.

ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು.

ಆದರೆ, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಪ್ರಭಾವವನ್ನು ಮನಗಂಡ ಹೈಕಮಾಂಡ್ , ಕೊನೆಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ವೋಟ್ ಬ್ಯಾಂಕಿನತ್ತ ಗಮನ ಕೇಂದ್ರೀಕರಿಸಿದೆ.

About The Author

Leave a Reply

Your email address will not be published. Required fields are marked *