2024 ರ ಲೋಕಸಭೆ ಚುನಾವಣೆ ನಂತರ ಮೋದಿ ಸರ್ಕಾದ ಇರುವುದು ಗ್ಯಾರಂಟಿ ಇಲ್ಲ : ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ
1 min readಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಆಯ್ಕೆಯಾಗಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಪರ ಆಡಳಿತ ನೀಡುತ್ತಿದೆ.
ಅದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೋಲಿನ ಹತಾಶೆಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರವಿದ್ದಾಗಲೇ ಎತ್ತಿನಹೊಳೆ ಯೋಜನೆ ಪ್ರಾರಂಭವಾಗಿದ್ದು, ಈ ಸರ್ಕಾರದ ಅವಧಿಯಲ್ಲೇ ಮುಕ್ತಾಯವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3 ಸಾವಿರ ಕೋಟಿ ರು.ಗಳನ್ನು ಬಿಡುಗಡೆ ಮಾಡಿದ್ದು, ಇಡೀ ಲೋಕಸಭಾ ಕ್ಷೇತ್ರದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದರು.