ಪೋಕ್ಸೊ ಪ್ರಕರಣ ಮತ್ತೆ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು
1 min read
ಎರಡನೇ ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಬೆನ್ನಲ್ಲೇ ಮುರುಘಾ ಶ್ರೀಗಳ ಬಂಧನವಾಗಿದೆ.
ದಾವಣಗೆರೆ/ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ/ಬೆಂಗಳೂರು: ಎರಡನೇ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹಾಗೂ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಿಗೆ ಹೈಕೋರ್ಟ್ ಅವಕಾಶ ನೀಡಿದ್ದರೂ, ಬಂಧನಕ್ಕೊಳಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಅಲ್ಲದೆ, ಈ ಆದೇಶದ ಪ್ರತಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ ಅವರು ತಕ್ಷಣ ಇ-ಮೇಲ್ ಮೂಲಕ ಚಿತ್ರದುರ್ಗ ಜೈಲು ಅಧಿಕಾರಿಗಳಿಗೆ ರವಾನಿಸಿ ಆದಷ್ಟು ಶೀಘ್ರದಲ್ಲಿ ಬಿಡುಗಡೆ ಕ್ರಮ ವಹಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದರು. ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಇಂದು ಬಂಧನ ವಾರಂಟ್ ಆದೇಶ ಹೊರಡಿಸಿದ್ದರು.
ವಾರಂಟ್ ಆದೇಶದ ಬೆನ್ನಲ್ಲೇ ಚಿತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪಿಐ ಮುದ್ದು ರಾಜ್ ನೇತೃತ್ವದ ತಂಡವು ದಾವಣಗೆರೆ ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಮುರುಘಾ ಶರಣರನ್ನು ಬಂಧಿಸಿದ್ದರು. ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ಶರಣರನ್ನು ಬಂಧಿಸಿ, ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣರನ್ನು ಹಾಜರುಪಡಿಸಿದ್ದರು.