ಕೋಲಾರ ಲಾಕಪ್ ಡೆತ್ ಪ್ರಕರಣ: ಪಿಎಸ್‌ಐ ಸೇರಿ ಇಬ್ಬರು ಕಾನ್ಸ್ಟೇಬಲ್ಗಳ ಅಮಾನತು
1 min read
ಕೋಲಾರದಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಸೇರಿ ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ.
ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬವರನ್ನು ಅಮಾನತು ಮಾಡಲಾಗಿದೆ.
ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು. ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರದೇ, ಬೇರೆ ಬೇರೆ ಸ್ಥಳಗಳಲ್ಲಿ ಇರಿಸಿ, 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.
ಆದರೆ, ಅಕ್ಟೋಬರ್ 1ರಂದು ಪೊಲೀಸ್ ಸುಪರ್ದಿಯಲ್ಲೇ ಮುನಿರಾಜು ಎಂಬವರು ಸಾವನ್ನಪ್ಪಿದ್ದರು. ಇದಾದ ನಂತರ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೇ ಆರೋಪಿಗಳನ್ನ ವಿಚಾರಣೆ ಮಾಡಿ, ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್ಪಿ ನಾರಾಯಣ ಅವರು ಅಮಾನತು ಮಾಡಿದ್ದಾರೆ. ಅಲ್ಲದೇ ಮೂವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.