ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಅಮಾನತು
1 min readಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಡಿ ಗ್ರೂಪ್ ನೌಕರ ರಮೇಶ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.
ಶಾಲಾ ಮುಖ್ಯ ಶಿಕ್ಷಕ ನಾಗಣ್ಣ ಕಾರಣ ಕೇಳಿ ರಮೇಶ್ ಗೆ ನೋಟಿಸ್ ನೀಡಿದ್ದಾರೆ. ನಾಗಣ್ಣ 25 ದಿನ ರಜೆ ಹಾಕಿದ್ದು, ಡಿಡಿಪಿಐ ಪಾಂಡುರಂಗ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಡಿ ಗ್ರೂಪ್ ನೌಕರ ರಮೇಶ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.