ಬೀದರ್ ನಗರದಲ್ಲಿ ಬೀದಿಗಿಳಿದು ಬಿಜೆಪಿ ನಾಯಕರಿಂದ ಪ್ರತಿಭಟನೆ
1 min read
ರಾಜ್ಯಸಭೆ ಕಾಂಗ್ರೆಸ್ ಸದಸ್ಯ ಧೀರಜ್ ಸಾಹು ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ರೂವಾರಿ ಎಂದು ಆರೋಪಿಸಿ
ಕೇಂದ್ರ ಸಚಿವ ಭಗವಂತ ಖೂಭಾ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ರಾಜ್ಯ ಸಭಾ ಸದಸ್ಯನ ಬಳಿ ೩೦೦ ಕೋಟಿಗಿಂತ ಹೆಚ್ಚಿನ ಹಣ ಪತ್ತೆಯಾಗಿದ್ದು, ಇದು ಇನ್ನೂ ಹೆಚ್ಚಾಗುವ ಸಾದ್ಯತೆ ಇದೆ. ಕಾಂಗ್ರೆಸ್ ಬ್ರಷ್ಟರ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಭಾ ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮುಖಂಡರಾದ ಶಶಿ ಹೊಸಲ್ಲಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರ ಹಾಕಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರ ಮುಖವಾಡ ಬಯಲಾಗಿದೆ ಎಂದು ಲೇವಡಿ ಮಾಡಿದ್ದಾರೆ.