ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡಿನ ಸಚಿವ ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್
1 min readಉನ್ನತ ಶಿಕ್ಷಣ ಸಚಿವ ಮತ್ತು ಡಿಎಂಕೆ ನಾಯಕ ಕೆ. ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಕೆ. ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಇಂದು (ಗುರುವಾರ) ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.
ನ್ಯಾಯಾಲಯ ಮೂರು ವರ್ಷಗಳ ಶಿಕ್ಷೆ ವಿಧಿಸಿರುವುದರಿಂದ ಸ್ವಯಂಚಾಲಿತವಾಗಿ ಅವರ ಶಾಸಕ ಸ್ಥಾನ ಅನರ್ಹವಾಗುತ್ತದೆ. ಅವರನ್ನು ಎಂಕೆ ಸ್ಟಾಲಿನ್ ನೇತೃತ್ವದ ಸಚಿವ ಸಂಪುಟದಿಂದ ಕೈಬಿಡಬಹುದು.