ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಚಿರತೆ
1 min readಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಚಿರತೆ
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಬಳಿಯ ವೀರಾಪುರದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,, ಕೈಗಾರಿಕಾ ಪ್ರದೇಶದಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ವೀರಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಂಟಿಕೊಂಡಿದೆ, ಗ್ರಾಮದ ರಾಮಮೂರ್ತಿ ಮನೆಯಂಗಳದಲ್ಲಿ ಚಿರತೆ ಒಡಾಡಿತ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ, ಮಧ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಮನೆ ಮುಂದಿನ ಅಡಿಕೆ ತೋಟದಲ್ಲಿ ಚಿರತೆ ಸಂಚರಿಸಿರುವ ದೃಶ್ಯ ಸೆರೆಯಾಗಿದೆ.
ರಾಮಮೂರ್ತಿಯವರ ಕೊಳಿಯನ್ನು ಚಿರತೆ ತಿಂದು ಹೋಗಿದ್ದು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ, ಸಾವಿರಾರು ಕಾರ್ಮಿಕರು ಈ ಪ್ರದೇಶದಲ್ಲಿ ವಾಸವಾಗಿದ್ದು, ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದಾರೆ.