ದೊಡ್ಡಕವಲಂದೆ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್
1 min readದೊಡ್ಡಕವಲಂದೆ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ಭರವಸೆ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಕಟ
ಮುಂದಿನ ಶೈಕ್ಷಣಿಕ ವರ್ಷದಿಂದ ದೊಡ್ಡಕವಲಂದೆ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನಂಜನಗೂಡು ತಾಲ್ಲೂಕಿನಲ್ಲಿ ಹೆಮ್ಮರಗಾಲ ಗ್ರಾಮದಲ್ಲಿ ಮಾತ್ರ ಕರ್ನಾಟಕ ಪಬ್ಲಿಕ್ ಶಾಲೆ ಇದೆ, ಹಾಗಾಗಿ ಕವಲಂದೆ ಭಾಗದ ಸುತ್ತಮುತ್ತಲ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಎಂದರು.
ಎಲ್.ಕೆಜಿ ಯಿಂದ ಪಿಯುಸಿ ತನಕ ಇಲ್ಲಿಯೇ ವಿದ್ಯಾಭ್ಯಾಸ ಮಾಡಬಹುದು. ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ. ಶಾಲೆಗಳಲ್ಲಿ ವಾರ್ಷಿಕೋತ್ಸವ ಎಂದರೆ ಹಬ್ಬದ ವಾತಾವರಣ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು.