ಹೊಸ ವರ್ಷಕ್ಕೆ ರಾಜ್ಯದ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ : ಮೊಟ್ಟೆ, ರಾಗಿ ಮಲ್ಟ್ ವಿತರಣೆ
1 min readಸರಕಾರಿ ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮುಂದಿನ ತಿಂಗಳಿಂದಲೇ ಎರಡು ಮೊಟ್ಟೆ ನೀಡಲಾಗುವುದು ಅಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ, ಪ್ರಶಸ್ತಿ ಪ್ರದಾನ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡಿ . ಅಲ್ಲದೆ, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್ ಐ)ಯ ಒಪ್ಪಿಗೆ ನಂತರ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ ರಾಗಿ ಮಾಲ್ಟ್ ನೀಡಲಾಗುವುದು, ಈಗಾಗಲೇ 1 ರಿಂದ 8ನೇ 3 ತರಗತಿಯವರಿಗೆ ಮೊಟ್ಟೆ ನೀಡಲಾಗುತ್ತಿದ್ದು, ಮುಂದಿನ ತಿಂಗಳಿಂದಲೇ 10 ತರಗತಿಯವರಿಗೂ ಮೊಟ್ಟೆ ನೀಡಲು ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ ಸೂಚಿಸಿದ್ದಾರೆ ಅಂತ ತಿಳಿಸಿದರು.