ನಂಜನಗೂಡಿನಲ್ಲಿ ಕ್ರಿಸ್ಮಸ್ ಸಂಭ್ರಮ
1 min readನಂಜನಗೂಡಿನಲ್ಲಿ ಕ್ರಿಸ್ಮಸ್ ಸಂಭ್ರಮ ಪರಸ್ಪರ ಶುಭಾಶಯ ಹಂಚಿಕೊಂಡ ಕ್ರೈಸ್ತರು
ಕ್ರೈಸ್ತರು ನಂಜನಗೂಡು ನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸೋಮವಾರ ಯೇಸು ಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ನಂಜನಗೂಡಿನ ಗುಂಡ್ಲುಪೇಟೆ ರಸ್ತೆಯ ಚರ್ಚ್, ಆರ್ ಪಿ ರಸ್ತೆಯ ಚರ್ಚ್‌ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶಿಲುಬೆ ಮುಂದೆ ನಿಂತು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.
ಭಾನುವಾರ ರಾತ್ರಿಯೇ ನಗರದ ಪ್ರಧಾನ ಚರ್ಚ್ ಆವರಣದಲ್ಲಿ ನಿರ್ಮಿ ಸಿರುವ ಕಣ್ಮನ ಸೆಳೆಯುವ ಗೋದಲಿಯ ದೀಪಾಲಂಕಾರ ವೀಕ್ಷಿಸಲು ಜನರು ಆಗಮಿಸಿದ್ದರು. ಪುಟಾಣಿ ಮಕ್ಕಳು, ಯುವಕ, ಯುವತಿಯರು ಹೊಸ ಬಟ್ಟೆ ಧರಿಸಿ, ನಗರದ ಚರ್ಚ್‌ಗಳಿಗೆ ಆಗಮಿಸಿದ್ದರು. ಚರ್ಚ್‌ನಲ್ಲಿ ಸೌಹಾರ್ಧ ಮಿಲನ ಮತ್ತು ಜಾನಪದ ನೃತ್ಯ ಕಾರ್ಯಕ್ರಮ ನಡೆದವು.
ಚರ್ಚ್ ಆವರಣದಲ್ಲಿ ನಿರ್ಮಿಸಿರುವ ಬಾಲ ಯೇಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿ ಎಲ್ಲರ ಗಮನ ಸೆಳೆಯಿತು. ಕ್ರೈಸ್ತರ ಮನೆ ಮನೆಗಳಲ್ಲಿ ಬಾಲ ಯೇಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿ ನಿರ್ಮಿಸಿ, ವಿದ್ಯುತ್ ದೀಪಾಲಂಕಾರ ಮಾಡಿದ್ದರು. ಪ್ರತಿ ಮನೆಯಲ್ಲಿ ಹಬ್ಬದ ಸಂಭ್ರಮ ತುಂಬಿ ತುಳುಕುತ್ತಿತ್ತು. ಈ ಭಾರಿ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಆಚರಣೆ ಮಾಡಿರುವುದು ಕಂಡು ಬಂತು.