ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರತಿಭಟನೆ
1 min readಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರತಿಭಟನೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವರ ವಿರುದ್ಧ ಆಕ್ರೋಶ
ಬರಗಾಲ ಬರಲಿ ಎಂದು ರೈತರೇ ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಖಂಡಿಸಿ
ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಜಮಾಯಿಸಿದ ರೈತರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಘೋಷಣೆ ಕೂಗಿ ಸಚಿವ ಸಂಪುಟದಿಂದ ಸಚಿವರನ್ನು ವಜಾಗೊಳಿಸ ಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾಸಾಗರ್ ಮಾತನಾಡಿ, ಜವಾಬ್ದಾರಿ ಸ್ಥಾನದಲ್ಲಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಸಾಲ ಮನ್ನಾ ನಿರೀಕ್ಷೆಯಲ್ಲಿ ಬಯಸುತ್ತಾರೆ ಎಂದು ರೈತರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ್ದಾರೆ. ರೈತರ ಬಗ್ಗೆ ಸಚಿವರ ಹಗುರವಾದ ಹೇಳಿಕೆ ಖಂಡನೀಯ. ಕೂಡಲೇ ರೈತರಲ್ಲಿ ಕ್ಷಮೆ ಯಾಚಿಸಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಬೇಜವಾಬ್ದಾರಿ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು, ಸಚಿವರು ರೈತರ ಬಳಿ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಚಿವರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಸೇರಿದಂತೆ ಹಲವರು ಭಾಗವಹಿಸಿದ್ದರು.