ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಭಾಗ್ಯನಗರ ಕರವೇ ವತಿಯಿಂದ ಮನವಿ
1 min readನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಭಾಗ್ಯನಗರ ಕರವೇ ವತಿಯಿಂದ ಮನವಿ
ಬಾಗೇಪಲ್ಲಿ; (ಭಾಗ್ಯನಗರ ) ತಾಲೂಕು
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ತಹಸೀಲ್ದಾರ್ ಪ್ರಶಾಂತ್ ಕೆ. ಪಾಟೀಲ್ ರವರಿಗೆ ಮನವಿ ಸಲ್ಲಿಸಿದರು….
ತಾಲ್ಲೂಕು ಕರವೇ ಅಧ್ಯಕ್ಷ ಹರೀಶ್ ಮಾತನಾಡಿ ನಾಡು -ನುಡಿ -ನೆಲ- ಜಲ -ಕನ್ನಡದ ಕಲೆ ಮತ್ತು ಸಂಸ್ಕೃತಿಗೆ ಧಕ್ಕೆ ಬಂದಾಗ ದಿಟ್ಟತನದಿಂದ ಹೋರಾಟಗಳನ್ನು ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಟಿ ಎ ನಾರಾಯಣಗೌಡರು ಅನ್ಯ ಭಾಷೆಯ ನಾಮಫಲಕಗಳ ವಿರುದ್ಧ ಹೋರಾಟವನ್ನು ರೂಪಿಸಿದ್ದ ಸಂದರ್ಭದಲ್ಲಿ ಹೋರಾಟ ನಡೆಸಲು ಅವಕಾಶ ಕೊಡದೆ ಬಂಧಿಸಿ ಜೈಲಿಗಟ್ಟಿದ್ದು ಖಂಡನೀಯ.
ಕನ್ನಡಕ್ಕೆ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂಬ ರಾಷ್ಟ್ರಕವಿ ಕುವೆಂಪುರವರ ಕವಿವಾಣಿಯಂತೆ ಇಂದು ಕನ್ನಡಕ್ಕೆ ಕೈ ಎತ್ತಿದರೆ ಕರೆದುಕೊಂಡು ಹೋಗಿ ಜೈಲಿಗಟ್ಟುವ ಸ್ಥಿತಿ ಕರ್ನಾಟಕ ರಾಜ್ಯದಲ್ಲಿ ಬಂದಿರುವುದು ಅತ್ಯಂತ ದುರಂತ. ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆಗೊಳಿಸಲು ಸರ್ಕಾರವನ್ನು ಒತ್ತಾಯಿಸಿ ಇಂದು ಭಾಗ್ಯನಗರ ಬಾಗೇಪಲ್ಲಿ ತಾಲೂಕು ದಂಡಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಿದ್ದಿವೆ.
ಉದ್ದಿಮೆದಾರರಿಗೆ ಪರವಾನಿಗಿ ಕೊಡುವಾಗ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕಗಳನ್ನು ಅಳವಡಿಸಲು ತಪ್ಪಿದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾ ಅಧ್ಯಕ್ಷರಾದ ಸುಜಾತಮ್ಮ , ಜಿಲ್ಲಾ ಕಾರ್ಯದರ್ಶಿ ಕೆ.ವಿ.ಮಂಜುನಾಥ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಿಯಾಜ್ ಉಲ್ಲಾ , ತಾಲ್ಲೂಕು ಕಾರ್ಯದರ್ಶಿ ಮಂಜುನಾಥ್ , ತಾಲ್ಲೂಕು ಸಂಚಾಲಕರಾದ ಶಿವಕುಮಾರ್ ನಗರ ಅಧ್ಯಕ್ಷರಾದ ಕೆ.ಶ್ರೀನಿವಾಸ , ಚಾಂದ್ ಭಾಷ , ಮುನಾವರ್ ಭಾಷ , ಕೇಶವ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು