ವಾಪಸಂದ್ರ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
1 min readಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಕಿಷ್ಕಿಂಧೆಯAತಹ ಜಾಗದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎ.ಅರುಣ ಕುಮಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಡಾವಣೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಿಷ್ಕಿಂಧೆ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ೪ ಗಮಟೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಾಲಯ, ರೋಗಿಗಳ ಪರೀಕ್ಷಾ ಕೊಠಡಿ, ನೋಡುವ ಸ್ಥಳ ಅಯುಷ್ಮತಿ ಕ್ಲಿನಿಕ್ ನಲ್ಲಿ ಸಮಾಲೋಚನೆ ನಡೆಸುವ ಕೊಠಡಿ ಸೇರಿದಂತೆ ಇಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.
ನಂತರ ಮಾತನಾಡಿದ ಅವರು, ಕಿಷ್ಕಿಂಧೆಯAತಿರುವ ಸ್ಥಳದಲ್ಲಿ ವೈದ್ಯಕೀಯ ಸಂಯೋಜನೆ ನಡೆಸುವುದು ಕಷ್ಟಕರವಾಗಿರುತ್ತದೆ. ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಳಾಂತರಿಸುವAತೆ ಸಂಬAಧಪಟ್ಟ ಅಧಿಕಾರಿಗಳು ಸೂಚನೆ ನೀಡುವುದಾಗಿ ಹೇಳಿದರು.
ಖಾಲಿ ಇರುವ ಜಾಗ ಗುರುತಿಸಿ ಆಸ್ಪತ್ರೆಗೆ ಸೂಕ್ತ ಜಾಗ ನೀಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಅನೇಕ ಸರ್ಕಾರಿ ಕಟ್ಟಡಗಳು ಇದ್ದು, ಇಂತಹ ಖಾಸಗಿ ಕಟ್ಟಡದಲ್ಲಿ ನಡೆಸುತ್ತಿರುವುದು ಸರಿಯಲ್ಲ ಎಂದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ಕೆ. ಮಂಜುಳಾ, ಡಾ.ಫತಿಮಾ ಇದ್ದರು.