ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವನ್ಯಜೀವಿ-ಮಾನವ ಸಂಘರ್ಷದಿಂದ 55 ಜನರ ಸಾವು : ಈಶ್ವರ್ ಖಂಡ್ರೆ
1 min readಪ್ರಸಕ್ತ ಸಾಲಿನಲ್ಲಿ ವನ್ಯಜೀವಿ-ಮಾನವ ಸಂಘರ್ಷದಿಂದ 55 ಜನ ಸಾವಿಗೀಡಾಗಿದ್ದು, ಆನೆ ದಾಳಿಗೆ ಅತಿ ಹೆಚ್ಚು 39 ಜನ ಬಲಿಯಾಗಿದ್ದಾರೆ. ಆನೆ ದಾಳಿ ನಿಯಂತ್ರಿಸಲು 186 ಕಿ. ಮೀ ಉದ್ದದಷ್ಟು ರೈಲ್ವೆ ಬ್ಯಾರಿ ಕೇಡ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ 500 ಕೋಟಿ ರೂ.ಯನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ಮುಖ್ಯಮಂತ್ರಿ ಯವರಲ್ಲಿ ಮನವಿ ಮಾಡಲಾಗಿದೆ. ಆನೆಗಳು ನಾಡಿಗೆ ಬರುವುದನ್ನು ತಪ್ಪಿಸಲು ಆನೆ ಕ್ಯಾಂಪ್ ನಿರ್ಮಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾಡಿನಲ್ಲಿ ಸಮರ್ಪಕ ಆಹಾರ ಮತ್ತು ನೀರಿನ ಲಭ್ಯತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಆನೆಗಳು ಕಾಡಿನಿಂದ ಹೊರ ಬರುವುದನ್ನು ತಡೆಯಲು 640 ಕಿ.ಮೀ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಸ್ತಾವನೆ ಇತ್ತು. ಪರಿಷ್ಕರಣೆಗೊಂಡು 730 ಕಿ.ಮೀಗೆ ಏರಿದೆ. ಅದರಲ್ಲಿ 311 ಕಿ.ಮೀ ಬ್ಯಾರಿಕೇಡ್ ಹಾಕಲಾಗಿದೆ. ಉಳಿದ ಕಾಮಗಾರಿಗೆ ಅಯವ್ಯಯದಲ್ಲಿ 100 ಕೋಟಿ ರೂ. ಮಾತ್ರ ಇತ್ತು. ಆ ಮೊತ್ತ ಸಾಲುವುದಿಲ್ಲ ಎಂಬ ಕಾರಣಕ್ಕೆ ಹೆಚ್ಚುವರಿ ಯಾಗಿ 100 ಕೋಟಿ ರೂ.ಯನ್ನು ಮುಖ್ಯಮಂತ್ರಿಯವರು ಮಂಜೂರು ಮಾಡಿದ್ದಾರೆ. ಹಾಲಿ 186 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnews