ಚಲಿಸುತ್ತಿದ್ದ ರೈಲಿನಿಂದ ಹಾರಿ ಪ್ರಾಣಬಿಟ್ಟ ಯುವತಿ
1 min readಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ತುಮಕೂರು ಮೂಲದ ನಯನಾ ಎಂ.ಜಿ (27) ಎಂದು ಗುರುತಿಸಲಾಗಿದ್ದು, ಕಣ್ಣೂರು- ಬೆಂಗಳೂರು- ಮಂಗಳೂರು ರೈಲಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು ಎಂದು ತಿಳಿದು ಬಂದಿದೆ.
ಟಿ-20 ವಿಶ್ವಕಪ್; ಟೀಂ ಇಂಡಿಯಾ ನಾಯಕ ಯಾರೆಂದು ಬಹಿರಂಗಪಡಿಸಿದ ಜಯ್ ಷಾ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವ ಕಾರಣಕ್ಕೆ ಪ್ರಾಣ ಕಳೆದುಕೊಂಡಳು ಎಂಬುದರ ಬಗ್ಗೆ ಈವರೆಗೆ ತಿಳಿದಿಲ್ಲ. ಯುವತಿಯ ಬ್ಯಾಗ್ನಲ್ಲಿದ್ದ ಆಧಾರ್ ಕಾರ್ಡ್ನಿಂದ ಆಕೆಯ ಗುರುತು ಪತ್ತೆಯಾಗಿದ್ದು, ಅಧಿಕೃತ ವಿಳಾಸ ಮತ್ತು ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವೇನು ಎನ್ನುವುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಸ್ಥಳೀಯರ ಸಹಾಯದಿಂದ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದ್ದು, ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura