ಪರ ಭಾಷೆಯಿಂದ ನಟಿ ರುಕ್ಮಿಣಿ ವಸಂತ್ಗೆ ಬರುತ್ತಿದೆ ಭರ್ಜರಿ ಆಫರ್
1 min readರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’‘ಸೈಡ್ ಎ’ ಹಾಗೂ ‘ಸೈಡ್ ಬಿ’ ಚಿತ್ರದಿಂದ ನಟಿ ರುಕ್ಮಿಣಿ ವಸಂತ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಈ ಸಿನಿಮಾದಲ್ಲಿ ರುಕ್ಮಿಣಿ (Rukmini Vasanth) ಅವರ ನಟನೆ ಗಮನ ಸೆಳೆದಿದೆ. ಅವರು ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಂಡಿದ್ದಾರೆ. ಈ ಚಿತ್ರ ತೆಲುಗಿನಲ್ಲೂ ಡಬ್ ಆಗಿ ರಿಲೀಸ್ ಆಗಿತ್ತು. ಹೀಗಾಗಿ ಪರ ರಾಜ್ಯದಲ್ಲೂ ಗಮನ ಸೆಳೆದರು ರುಕ್ಮಿಣಿ. ಈ ಕಾರಣಕ್ಕೆ ಪರ ಭಾಷೆಗಳಿಂದ ಅವರನ್ನು ಹಲವು ಆಫರ್ಗಳು ಹುಡುಕಿ ಬರುತ್ತಿವೆ.
ರುಕ್ಮಿಣಿ ಅವರ ಬೇಡಿಕೆ ಭರ್ಜರಿಯಾಗಿ ಏರಿಕೆ ಆಗಿದೆ. ಅವರು ಶ್ರೀಮುರಳಿ ನಟನೆಯ ‘ಭಗೀರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಚಿತ್ರಕ್ಕೂ ರುಕ್ಮಿಣಿ ನಾಯಕಿ ಆಗಿದ್ದಾರೆ. ಈ ಎರಡೂ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇದರ ಜೊತೆಗೆ ಅವರಿಗೆ ಎರಡು ತಮಿಳು ಸಿನಿಮಾ ಕೂಡ ಸಿಕ್ಕಿದೆ.
ವಿಜಯ್ ಸೇತುಪತಿ ನಟನೆಯ 51ನೇ ಚಿತ್ರಕ್ಕೆ ರುಕ್ಮಿಣಿ ನಾಯಕಿ. ಇದು ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಇದಲ್ಲದೆ, ಶಿವಕಾರ್ತಿಕೇಯ ನಟನೆಯ 23ನೇ ಸಿನಿಮಾಗೂ ರುಕ್ಮಿಣಿ ನಾಯಕಿ ಆಗಿದ್ದಾರೆ. ಈ ಚಿತ್ರಕ್ಕೆ ಎಆರ್ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಸಿನಿಮಾ ಆಫರ್ಗಳು ಅವರನ್ನು ಹುಡುಕಿ ಬರುತ್ತಿವೆ. ಎಲ್ಲವನ್ನೂ ಅಳೆದು ತೂಗಿ ಅವರು ಒಪ್ಪಿಕೊಳ್ಳುತ್ತಿದ್ದಾರೆ.
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು. ಈ ವಿಚಾರಕ್ಕೆ ಅವರ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿತ್ತು. ‘ನಾನು ವಿಜಯ್ ಜೊತೆ ಸಿನಿಮಾ ಮಾಡುತ್ತಿಲ್ಲ. ಅದು ಕೇವಲ ವದಂತಿ’ ಎಂದು ಸ್ಪಷ್ಟನೆ ನೀಡಿದ್ದರು.
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್-ಬಿನಲ್ಲಿ ಈ ದೃಶ್ಯಗಳ ಗಮನಿಸಿದಿರಾ?
‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಹೇಮಂತ್ ರಾವ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಎರಡು ಭಾಗಗಳಲ್ಲಿ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರ ಸದ್ಯ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura