ದರ್ಶನ್ ಹಾಗೂ ಗ್ಯಾಂಗ್ ನಿಂದ ಹತ್ಯೆ ಪ್ರಕರಣ: ಇದು ಯಾರೂ ಕ್ಷಮಿಸಲಾರದ ಹೇಯ ಕೃತ್ಯ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಬಿ.ಸಿ.ಪಾಟೀಲ್
1 min readದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಹತ್ಯೆ ದುರದೃಷ್ಟಕರ. ಕ್ಷಮಿಸಲಾರದ ಕೃತ್ಯ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಜೀವ ಮತ್ತೆ ವಾಪಾಸ್ ಬರಲ್ಲ.
ಆದರೆ ಅವರ ಕುಟುಂಬಕ್ಕೆ ನ್ಯಾಯ ಸಿಗುವ ಕೆಲಸವಾಗಬೇಕು. ರೇಣುಕಾಸ್ವಾಮಿ ಹತ್ಯೆ ಯಾರೂ ಕ್ಷಮಿಸಲಾರದ ಕೃತ್ಯವಿದು. ಕೇಸ್ ನಲ್ಲಿ ಯಾರೇ ತಪ್ಪಿತಸ್ಥರಾಗಿರಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಕಾನೂನು ಎಲ್ಲವನ್ನೂ ಮೀರಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.