ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್.ಅಶೋಕ್
1 min readಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ ಎಂದು ವ್ಯಂಗ್ಯವಾಡಿದರು.
ತೈಲ ಬೆಲೆ ಏರಿಯಾದರೆ ಸಿಮೆಂಟ್, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್ ಎಂದು ಹಾಕುತ್ತೇನೆ ಎಂದರು. ಆದರೆ ಟಕಾಟಕ್ ಎಂದು ಜೇಬಿಗೆ ಕತ್ತರಿ ಹಾಕಿದ್ದಾರೆ ಎಂದರು.
ಬಿಜೆಪಿ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದು, ಟಿಕೆಟ್ ದರ ಶೇ.12 ರಷ್ಟು ಹೆಚ್ಚಿಸಲು ಚರ್ಚೆಯಾಗಿದೆ. ಕಾಫಿ ಟೀ ದರ ಕೂಡ ಹೆಚ್ಚಲಿದೆ. ಕಾಂಗ್ರೆಸ್ ಸತ್ತರೆ ತಿಥಿಗೆ ಮಾಡುವ ಉದ್ದಿನ ವಡೆಯ ಬೆಲೆ ಕೂಡ ಹೆಚ್ಚಾಗಲಿದೆ ಎಂದರು.
ಗ್ಯಾರಂಟಿಗೆ 55,000 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದಿದ್ದರು. ಬಳಿಕ ನಮ್ಮದೇ ಹಣವನ್ನು ದರೋಡೆ ಮಾಡಿ ನಮಗೆ ಮರಳಿ ನೀಡುತ್ತಿದ್ದಾರೆ. ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯ ನಡೆದಿಲ್ಲ, ಶಿಕ್ಷಕರಿಗೆ ಸಂಬಳ ನೀಡಿಲ್ಲ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿಲ್ಲ. ಬೆಂಗಳೂರನ್ನು ಬ್ರ್ಯಾಂಡ್ ಮಾಡುತ್ತೇನೆಂದು ಹೇಳಿ ಭಾಗ ಮಾಡಲು ಮುಂದಾಗಿದ್ದಾರೆ. ಬೆಂಗಳೂರನ್ನು ಭಾಗ ಮಾಡಿದರೆ ಕಾಂಗ್ರೆಸ್ ಕಚೇರಿಯನ್ನು ಜನರು ಭಾಗ ಮಾಡುತ್ತಾರೆ. ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳಲಿದೆ. ಲೋಕಸಣೆ ಚುನಾವಣೆಯಲ್ಲಿ 143 ಕ್ಷೇತ್ರ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೂ ಹೆಚ್ಚು ಮತಗಳು ಬಿಜೆಪಿಗೆ ಬಂದಿದೆ ಎಂದರು.
ದಲಿತರ ಹಣ ನುಂಗಿದ ಮುಖ್ಯಮಂತ್ರಿ
ದಲಿತರ 187 ಕೋಟಿ ರೂಪಾಯಿ ನುಂಗಿ ಸಚಿವ ಬಿ.ನಾಗೇಂದ್ರ ಔಟ್ ಆಗಿದ್ದಾರೆ. ಇನ್ನು ಎರಡನೇ ವಿಕೆಟ್ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ. ಸಚಿವ ನಾಗೇಂದ್ರ 20 ಪರ್ಸೆಂಟ್ ಜೇನು ಕಿತ್ತಿದ್ದು ಮಾತ್ರ, ಆದರೆ 80 ಪರ್ಸೆಂಟ್ ಜೇನನ್ನು ಸಿಎಂ ಸಿದ್ದರಾಮಯ್ಯ ಹೊಡೆದಿದ್ದಾರೆ. ಈ ಹಣ ತೆಲಂಗಾಣಕ್ಕೆ ಹೋಗಿ, ಬಳಿಕ ಬಾರ್‌ಗಳಿಗೆ ಹೋಗಿದೆ. ದಲಿತರ ಉದ್ಯಮಗಳಿಗೆ, ಅಂಗಡಿಗಳಿಗೆ, ಅವರ ಮಕ್ಕಳ ಸ್ಕಾಲರ್‌ಶಿಪ್‌ಗೆ ಈ ಹಣ ಕೊಡಬೇಕಿತ್ತು. ಚೆಕ್‌ನಲ್ಲೇ ಹಗಲು ದರೋಡೆ ಮಾಡಿದ್ದಾರೆ. ಇದರಿಂದಾಗಿ ನಿಷ್ಠಾವಂತ ಅಧಿಕಾರಿ ಸತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಜನರು ಕಲುಷಿತ ನೀರು ಕುಡಿದು ಸಾಯುತ್ತಿದ್ದರೂ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಸರ್ಕಾರಿ ಆಸ್ಪತ್ರೆಗೆ ಔಷಧಿ ಖರೀದಿಗೆ, ಶಾಲೆಗೆ ಪುಸ್ತಕ ಕೊಡಲು ಹಣವಿಲ್ಲ. ಇದಕ್ಕಾಗಿಯೇ ತೈಲ ಬೆಲೆ ಏರಿಕೆ ಮಾಡಿ ಹಣ ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು.
ಬಂಡವಾಳ ಬಯಲು ಮಾಡುತ್ತೇವೆ
ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ. ಹೀಗೆಯೇ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡುತ್ತಾರೆ. ಎಲ್ಲರೂ ದಂಗೆ ಎದ್ದು ಈ ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ಕರೆ ನೀಡಿದರು.
* https://youtube.com/@ctvnewschikkaballapura?si=C-CJWuVfM-65JQMa
* LIVE: https://shashwatha.com/player.php?url=https://shashwatha.com/hls/shashwatha/ctvnews.m3u8
* CTV News : https://ctvnewskannada.com/
* Subscribe to Ctv News: https://www.youtube.com/channel/UCHtq26kA5D5anCbPD3HoURw
* Big News Big Update : https://ctvnewskannada.com/
* Download CTV Android App: https://play.google.com/store/apps/details?id=com.ctv.ctvnews
* Like us on Facebook: https://www.facebook.com/ctvnewschikkaballapura
* Follow us on Instagram: https://www.instagram.com/ctvnewschikkaballapura/
* Follow us on Twitter: https://twitter.com/ctvnewscbpura