ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಸಿಕ್ಕಿಂ ಭೂಕುಸಿತ: ಸಿಲುಕಿರುವ ಸಾವಿರಕ್ಕೂ ಹೆಚ್ಚು ಪ್ರವಾಸಿಗರು; 200 ಜನರ ರಕ್ಷಣೆ

1 min read

ಸಿಕ್ಕಿಂನ ಲಾಚುಂಗ್‌ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಇನ್ನೂ ಸಾವಿರಕ್ಕೂ ಹೆಚ್ಚು ಜನರು ಅಲ್ಲಿಯೇ ಸಿಲುಕಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪ್ರವಾಸಿಗರನ್ನು ಚುಂಗ್‌ಥಾಂಗ್ ಮೂಲಕ ಮಂಗನ್ ಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿಂದ ಅವರನ್ನು ಗ್ಯಾಂಗ್ಟಕ್‌ಗೆ ಕರೆದೊಯ್ಯಲು ಸಾರಿಗೆ ಇಲಾಖೆಯಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಸೋಮವಾರ 150 ಹಾಗೂ ಮಂಗಳವಾರ 64 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದೆ. ಉಳಿದವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಭಾರಿ ಮಳೆ, ಭೂಕುಸಿತದಿಂದ ಈವರೆಗೆ ಆರು ಜನ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ಸ್ವಯಂಸೇವಕರೊಂದಿಗೆ ಜಿಲ್ಲಾಡಳಿತವು ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸುತ್ತಿದೆ ಎಂದು ಅವರು ಹೇಳಿದರು.

#ctvnews #ctvNews #ctv

About The Author

Leave a Reply

Your email address will not be published. Required fields are marked *