T20WC Super 8 AUS vs BNG: ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ ಪ್ಯಾಟ್ ಕಮಿನ್ಸ್
1 min readನಾರ್ತ್ ಸೌಂಡ್(ಆಯಂಟಿಗುವಾ) ಇಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಕ್ರಿಕೆಟ್‌ನ ಗುಂಪು ಸೂಪರ್ ಎಂಟರ ಗುಂಪು ಒಂದರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ.
31 ವರ್ಷದ ಕಮಿನ್ಸ್ 18ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಮೆಹಮದುಲ್ಲಾ ಮತ್ತು ಮಹೆದಿ ಹಸನ್ ಅವರನ್ನು ಔಟ್ ಮಾಡಿದರು.
ಕೊನೆಯ ಓವರ್‌ನ ಮೊದಲ ಎಸೆತದಲ್ಲಿ ಟೊವಿಡ್ ಹೃದೊಯ್ ಅವರ ವಿಕೆಟ್ ಗಳಿಸುವ ಮೂಲಕ ಟಿ-20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ 7ನೇ ಆಟಗಾರ ಎನಿಸಿದರು.
ಈ ಆವೃತ್ತಿಯ ಮೊದಲ ಹ್ಯಾಟ್ರಿಕ್ ಸಾಧನೆ ಇದಾಗಿದೆ. 4 ಓವರ್‌ಗಳಲ್ಲಿ ಪ್ಯಾಟ್ 39 ರನ್ ನೀಡಿ 3 ವಿಕೆಟ್ ಕಬಳಿಸಿದರು.
ಈ ಮೂಲಕ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ 2ನೇ ಆಸೀಸ್ ಬೌಲರ್ ಎಂಬ ಖ್ಯಾತಿಗೆ ಪ್ಯಾಟ್ ಪಾತ್ರರಾದರು. ಮತ್ತೊಬ್ಬ ಆಸ್ಟ್ರೇಲಿಯಾ ಬೌಲರ್ ಬ್ರೆಟ್ ಲೀ ಸಹ ಬಾಂಗ್ಲಾದೇಶದ ವಿರುದ್ಧವೇ ಹ್ಯಾಟ್ರಿಕ್ ಸಾಧನೆ ಮಾಡಿರುವುದು ವಿಶೇಷ..
2007ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಬ್ರೆಟ್ ಲಿ ಮೊದಲಿಗರಾಗಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. 2021ರವರೆಗೆ ಈ ಸಾಧನೆ ಮಾಡಿದ ಏಕೈಕ ಬೌಲರ್ ಎಂಬ ದಾಖಲೆ ಅವರ ಹೆಸರಿನಲ್ಲಿತ್ತು. 2021ರಲ್ಲಿ ಐರ್ಲೆಂಡ್ ವೇಗಿ ಕರ್ಟಿಸ್ ಕ್ಯಾಂಪರ್, ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗಾ, ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ ಈ ಸಾಧನೆ ಮಾಡಿದ್ದರು.
2022ರಲ್ಲಿ ಯುಎಇ ತಂಡದ ಕಾರ್ತಿಕ್ ಮೇಯಪ್ಪನ್, ಐರ್ಲೆಂಡ್‌ನ ಜೊಶು ಲಿಟ್ಟಲ್ ಹ್ಯಾಟ್ರಿಕ್ ವಿಕೆಟ್ ದಾಖಲೆ ಬರೆದಿದ್ದರು.
ಪಂದ್ಯಕ್ಕೆ ಮಳೆ ಅಡ್ಡಿ: ಡಕ್ವರ್ಥ್ ಲೂಯಿಸ್ ಅನ್ವಯ ಆಸ್ಟ್ರೇಲಿಯಾಗೆ ಜಯ
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಬಾಂಗ್ಲಾದೇಶ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿದೆ. ಸಾಧಾರಣ ಗುರಿಯನ್ನು ಬೆನ್ನಟ್ಟಿರುವ ಆಸ್ಟ್ರೇಲಿಯಾ ತಂಡ ಮಳೆಯಿಂದ ಪಂದ್ಯ ನಿಂತಾಗ 11.2 ಓವರ್‌ಗಳಲ್ಲಿ 2 ವಿಕೆಟ್ ಕಳೆದಕೊಂಡು 100 ರನ್ ಗಳಿಸಿತ್ತು.
ಬಹಳ ಸಮಯದ ಬಳಿಕವೂ ಮಳೆ ನಿಲ್ಲದ ಕಾರಣ ಡಕ್ವರ್ತ ಲೂಯಿಸ್ ನಿಯಮದ ಅನ್ವಯ ಆಸ್ಟ್ರೇಲಿಯಾ ತಂಡವನ್ನು 28 ರನ್‌ಗಳಿಂದ ವಿಜಯಶಾಲಿ ಎಂದು ಘೋಷಿಸಲಾಯಿತು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday