‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆಗೆ ‘ಸಿಎಂ ಸಿದ್ಧರಾಮಯ್ಯ’ ಗ್ರೀನ್ ಸಿಗ್ನಲ್
1 min readತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಕೆಲ ಬೇಡಿಕೆ ಈಡೇರಿಸೋದಕ್ಕೆ ಅಸ್ತು ಎಂದಿರುವುದಾಗಿ ತಿಳಿದು ಬಂದಿದೆ.
ಕಳೆದ ಗುರುವಾರದಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಆ ಬಳಿಕ ಮಾತನಾಡಿದ್ದಂತ ಅವರು, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು.
ಇಂದು ಈ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಂತ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅಂಗನವಾಡಿ ಕಾರ್ಯಕರ್ತೆಯರು ಇಟ್ಟಿರುವಂತ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರ ಕೆಲ ಬೇಡಿಕೆ ಈಡೇರಿಸಲು ಅಸ್ತು ಎಂದಿರುವುದಾಗಿ ಹೇಳಲಾಗುತ್ತಿದೆ.