ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ರಾಜ್ಯಾಧ್ಯಂತ ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

1 min read

ರಾಜ್ಯಾಧ್ಯಂತ ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಿಸುವಂತೆ ಸಿಎಂ ಸಿದ್ಧರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಎಂದರು.

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. *ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂಬುದಾಗಿ ತಿಳಿಸಿದರು.

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಿದರು.

ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘಿ ಈಡಿಸ್‌ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸೂಚಿಸಿದರು.

About The Author

Leave a Reply

Your email address will not be published. Required fields are marked *