ಕೃಷಿಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ
1 min readವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಕೃಷಿಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆ
ಬೀದರ್ ಜಿಲ್ಲೆಗೆ ಕೃಷಿ ಭಾಗ್ಯ ಯೋಜನೆಗೆ ಖಂಡ್ರೆ ಆಗ್ರಹ
ಬೀದರ್ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗಿಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಕೃಷಿ ಸಚಿವ ಎನ್. ಚಲುವರಾಯಸ್ವಮಿ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಲಬುರಗಿ ವಿಭಾಗ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಕಲಬುರಗಿ ವಿಭಾಗದ ಬೀದರ್, ಗುಲ್ಬರ್ಗಾ, ಕೊಪ್ಪಳ, ಬಳ್ಳಾರಿ. ವಿಜಯಪುರ. ಯಾದಗಿರ ಮತ್ತು ರಾಯಚೂರು ಜಿಲ್ಲೆಗಳನ್ನು ಒಳಗೊಂಡಿದ ಕೃಷಿ ಅಧಿಕಾರಿಗಳು ಭಾಗಿಯಾಗಿದ್ದರು. ವಿವಿಧ ಜಿಲ್ಲೆಯಲ್ಲಿ ಕಳೆದ ತಿಂಗಳು ಉತ್ತಮ ಮಳೆ ಆಗಿದ್ದರೆ, ಒಂದು ವಾರ ಮಳೆ ಬಾರದಿದ್ದರೆ ಮರು ಬಿತ್ತನೆ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ಕೃಷಿ ಸಚಿವ .ಎನ್. ಚಲುವರಾಯಸ್ವಾಮಿಗೆ ಮಾಹಿತಿ ನೀಡಿದರು.
ರೈತರಿಗೆ ಬೆಳೆ ವಿಮೆ ಮಾಡಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು, ಬೀದರ್ ಜಿಲ್ಲೆ ರಾಜ್ಯದಲ್ಲಿ ಅತಿ ಕಡಿಮೆ ನೀರಾವರಿ ಪ್ರದೇಶವಾಗಿದ್ದು, ಈ ಜಿಲ್ಲೆಗೆ ಕೃಷಿ ಭಾಗ್ಯ ಯೋಜನೆ ಜಾರಿ ಮಾಡುವಂತೆ ಕೃಷಿ ಸಚಿವರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು. ಇದರಿಂದ ಬೀದರ್ ಜಿಲ್ಲೆಯನ್ನು ಕೃಷಿ ಭಾಗ್ಯ ಯೋಜನೆ ಜಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹಿಂಖಾನ್ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.