ಹಲ್ಲರೆ ಪ್ರಕರಣ ಕೊನೆಗೂ ಸುಖಾಂತ್ಯ
1 min readಹಲ್ಲರೆ ಪ್ರಕರಣ ಕೊನೆಗೂ ಸುಖಾಂತ್ಯ
ಅoಬೇಡ್ಕರ್ ನಾಮಫಲಕ ಅಳವಡಿಸಿದ ತಾಲ್ಲೂಕು ಆಡಳಿತ
ಗ್ರಾಮದಲ್ಲಿ ಶಾಂತಿ ಸಭೆ ನಡೆಸಿದ ಅಧಿಕಾರಿಗಳು
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲಿ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಕೊನೆಗೂ ನಂಜನಗೂಡು ತಾಲ್ಲೂಕು ಆಡಳಿತ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸಿ, ಪ್ರಕರಣಕ್ಕೆ ತೆರೆ ಎಳೆಯುವಲ್ಲಿ ಯಶಸ್ವಿಯಾಗಿದೆ.
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಕೊನೆಗೂ ನಂಜನಗೂಡು ತಾಲ್ಲೂಕು ಆಡಳಿತ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸಿ, ಪ್ರಕರಣಕ್ಕೆ ತೆರೆ ಎಳೆಯುವಲ್ಲಿ ಯಶಸ್ವಿಯಾಗಿದೆ. ಜೂ.29 ರಂದು ಹಲ್ಲೆರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು.
ಈ ನಡುವೆ ಸಾಕಷ್ಟು ಮನೆಗಳು ಮತ್ತು ವಾಹನಗಳು ಜಖಂ ಆಗಿದ್ದವು. ಸಾಕಷ್ಟು ಜನರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆ ಸೇರಿದ್ದರು. 40ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು. ತಾಲ್ಲೂಕು ಆಡಳಿತದ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣ ನಡೆದು ನಾಲ್ಕು ತಿಂಗಳು ಕಳೆದರೂ ತಾಲೂಕು ಆಡಳಿತ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸಿಲ್ಲ ಹಾಗಾಗಿ ನಾವೇ ಕಾಲ್ನಡಿಗೆ ಮೂಲಕ ತೆರಳಿ ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ದಲಿತ ಸಂಘಟನೆಗಳು ಒಕ್ಕೂಟ ಪ್ರಕಟಿಸಿತ್ತು.
ಜೂ.29 ರಂದು ಹಲ್ಲರೆ ಚಲೋ ಕಾಲ್ನಡಿಗೆ ಮೂಲಕ ಪಾದಯಾತ್ರೆಯನ್ನು ದಲಿತ ಪರ ಸಂಘಟನೆಗಳು ಹಮ್ಮಿಕೊಂಡಿದ್ದವು. ಇದರ ಪರಿಣಾಮವಾಗಿ ತಾಲ್ಲೂಕು ಆಡಳಿತ ಅಂಬೇಡ್ಕರ್ ನಾಮಫಲಕವನ್ನು ಇಂದು ಅಳವಡಿಸಿದೆ. ನಾಮಫಲಕದ ಸುತ್ತ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಪ್ರತಿಭಟನೆಗೆ ಅವಕಾಶ ಕೊಡದೆ ತಾಲ್ಲೂಕು ಆಡಳಿತ ಎಚ್ಚೆತ್ತುಕೊಂಡು ಗ್ರಾಮಕ್ಕೆ ತಹಶೀಲ್ದಾರ್ ಶಿವಕುಮಾರ್ ಕಾನ್ನೂರ್, ಡಿವೈಎಸ್ಪಿ ರಘು, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಭೀಮರಾವ್ ವಡ್ಡರ್ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಕಾನೂನಿನ ಪ್ರಕಾರ ಎರಡು ಸಮುದಾಯದವರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಅಧಿಕಾರಿಗಳು, ಶಾಂತಿ ಸಭೆ ನಡೆಸಿ, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯಲ್ಲಿ ಕೊನೆಗೂ ನಾಮಫಲಕ ಅಳವಡಿಸಿದ್ದಾರೆ.