ಚಾಮರಾಜನಗರ : ಅಕ್ರಮವಾಗಿ ‘ಗಾಂಜಾ’ ಸಾಗಣೆ : ನಾಲ್ವರು ಆರೋಪಿಗಳು ವಶಕ್ಕೆ
1 min readಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅನುಮಾನಸ್ಪದವಾಗಿ ಓಡಾಡುತ್ತಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾರಾಟ ಮಾಡಲು ಪ್ಲಾನ್ ಮಾಡಿದ್ದ 4 ಆರೋಪಿಗಳನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಪ್ರದೀಪ್( 23) ಪ್ರೀತಮ್ (26) ಶ್ರೇಯಸ್(24) ಅಭಿಷೇಕ್( 25 ) ಎಂದು ಗುರುತಿಸಲಾಗಿದೆ. ಬಂಧಿತರು ಬೈಕ್ ನಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ವಿಷಯ ತಿಳಿದ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯ ಪೊಲೀಸರ ತಂಡವು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಕೂಡಲೇ ನಾಲ್ವರನ್ನು ಬಂಧಿಸಿ ಸುಮಾರು 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday