ತಿರುವಿನಲ್ಲಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್
1 min readತಿರುವಿನಲ್ಲಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್
ಚಾಲಕ ಸೇರಿ ಮೂವರ ಸ್ಥಿತಿ ಗಂಭೀರ
ಉಳಿದವರು ಪ್ರಾಣಾಪಾಯದಿಂದ ಪಾರು
ತಿರುವು ಪಡೆಯ್ಳುತ್ತಿದ್ದ ವೇಳೆ ಸಾರಿಗೆ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಈ ಅವಘಡದಲ್ಲಿ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಬಳಿ ಘಟನೆ ನಡೆದಿದೆ.
ತಿರುವು ಪಡೆಯ್ಳುತ್ತಿದ್ದ ವೇಳೆ ಸಾರಿಗೆ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಈ ಅವಘಡದಲ್ಲಿ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಬಳಿ ಘಟನೆ ನಡೆದಿದೆ. ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಿಂದ ಎಸ್. ಹೊಸಕೋಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ೩೪೬ನೇ ನಂಬರಿನ ಸಾರಿಗೆ ಬಸ್ ಅಪಘಾತಕ್ಕೆ ಒಳಗಾದ ಬಸ್ ಆಗಿದೆ.
ಕಂದಕಕ್ಕೆ ಬಸ್ ಉರುಳಲು ಚಾಲಕನ ಅತಿ ವೇಗವೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವೇಗವಾಗಿ ಬಂದು ತಿರುವು ಪಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿಯಾಗಿ ಬಿದ್ದಿದೆ. ಸುಮಾರು ೨೫ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ತೆರಳುತ್ತಿದ್ದು. ಬಸ್ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ೧೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ವರುಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಿದ್ದಾರೆ.