ಸೋಮನಾಥ ಪುರದಲ್ಲಿ ಚರಂಡಿ, ತ್ಯಾಜ್ಯದಿಂದ ದುರ್ನಾತ
1 min readಸೋಮನಾಥ ಪುರದಲ್ಲಿ ಚರಂಡಿ, ತ್ಯಾಜ್ಯದಿಂದ ದುರ್ನಾತ
ಸಾಂಕ್ರಾಮಿ ರೋಗ ಭೀತಿಯಲ್ಲಿ ಗ್ರಾಮದ ಜನತೆ
ತಿಂಗಳುಗಳೇ ಕಳೆದರೂ ಪರಿಹಾರ ಹುಡುಕದ ಗ್ರಾಪಂ
ಚೇಳೂರು ತಾಲ್ಲೂಕಿನ ಸೋಮನಾಥಪುರ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದ ಅಂಬೇಡ್ಕರ್ ಕಾಲೋನಿ ಚರಂಡಿ ಅವ್ಯವಸ್ಥೆಯಿಂದ ಚರಂಡಿ ನೀರು, ತ್ಯಾಜ್ಯ ವಸ್ತುಗಳಿಂದ ತುಂಬಿ ಕೊಳಚೆ ತಾಣವಾಗಿ ಬದಲಾಗಿದೆ. ಇದರಿಂದ ಸುತ್ತ ಮುತ್ತಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜೀವನ ನಡೆಸುವ ಆತಂಕ ಎದುರಾಗಿದೆ.
ಚೇಳೂರು ತಾಲ್ಲೂಕಿನ ಸೋಮನಾಥಪುರ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದ ಅಂಬೇಡ್ಕರ್ ಕಾಲೋನಿ ಚರಂಡಿ ಅವ್ಯವಸ್ಥೆಯಿಂದ ಚರಂಡಿ ನೀರು, ತ್ಯಾಜ್ಯ ವಸ್ತುಗಳಿಂದ ತುಂಬಿ ಕೊಳಚೆ ತಾಣವಾಗಿ ಬದಲಾಗಿದೆ. ಇದರಿಂದ ಸುತ್ತ ಮುತ್ತಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜೀವನ ನಡೆಸುವ ಆತಂಕ ಎದುರಾಗಿದೆ. ಗ್ರಾಮದ ಮುಖ್ಯ ಚರಂಡಿ ನೀರು ನೇರವಾಗಿ ಹರಿಯದೆ ನಿಂತಲ್ಲೇ ನಿಂತಿದೆ. ಇದರಿಂದ ಗ್ರಾಮದಲ್ಲಿ ದುರ್ನಾತ ಬೀರುತ್ತಿದ್ದು, ನಿವಾಸಿಗಳು ಸೊಳ್ಳೆಗಳ ಕಾಟದಿಂಜ ನಾನಾ ರೋಗಗಳಿಗೆ ತುತ್ತಾಗಿದ್ದಾರೆ.
ಕೊಳಚೆ ಹೆಚ್ಚಾಗಿರುವ ಕಾರಣ ಕ್ರಿಮಿಕೀಟಗಳ ಆವಾಸಸ್ಥಾನವಾಗಿ ಬದಲಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಬೇಕು ಎಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಳವತ್ತುಕೊಂಡಿದ್ದಾರೆ.
ಕೊಳಚೆ ಪ್ರದೇಶವಾಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷö್ಯ ತೋರುತ್ತಿದ್ದಾರೆ ಎಂದು ಆರೋಪಿಸಿರುವ ಸ್ಥಳೀಯರು, ಚರಂಡಿ ನೀರು ಸರಾಗವಾಗಿ ಹರಿದುಹೋಗಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಈಗಾಗಲೇ ಚರಂಡಿಯಿAದ ದುರ್ನಾತ ಬಾರುತ್ತಿದ್ದು, ತಿಂಗಳುಗಳೇ ಕಳೆದರೂ ಇದನ್ನು ಸ್ವಚ್ಛಗೊಳಿಸುವುದಾಗಲೀ, ಪರ್ಯಾಯ ವ್ಯವಸ್ಥೆ ಕಲ್ಪಿಸುವತ್ತ ಆಗಲೀ ಸಂಬAಧಿಸಿದ ಗ್ರಾಮ ಪಂಚಾಯಿತಿ ಗಮನ ಹರಿಸಿಲ್ಲ. ಇದರಿಂದ ಸ್ಥಳೀಯರು ನರಕ ಅನುಭವಿಸುವಂತಾಗಿದೆ ಎಂದು ಆಳಲು ತೋಡಿಕೊಂಡಿದ್ದಾರೆ.
ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಚರಂಡಿಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿ, ತ್ಯಾಜ್ಯ ನೀರು ಹರಿದುಹೋಗಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಆ ಮೂಲಕ ಸ್ಥಳೀಯರನ್ನು ಸಾಂಕ್ರಾಮಿಕ ರೋಗ ಭೀತಿಯಿಂದ ದೂರ ಮಾಡಬೇಕು. ಇಲ್ಲವಾದರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.