ಸರ್ಕಾರ ಹೊಸ ಕಾಯ್ದೆ ತರುವಂತೆ ಕರವೇ ಪ್ರತಿಭಟನೆ
1 min readಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಕಾಯ್ದೆ ಜಾರಿಗೆ ಆಗ್ರಹ
ಸರ್ಕಾರ ಹೊಸ ಕಾಯ್ದೆ ತರುವಂತೆ ಕರವೇ ಪ್ರತಿಭಟನೆ
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ
ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಸಮಗ್ರ ಕಾಯ್ದೆ ರೂಪಿಸಲು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಇಂದು ಬೃಹತ್ ಪ್ರತಿಭಟನೆ ನಡೆಸಿತು. ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿರುವ ಜಿಲ್ಲಾಡಳಿತ ಭವನದ ಮುಂದೆ ಕರವೇ ಪ್ರತಿಭಟನೆ ನಡೆಸಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಆಗಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಸಮಗ್ರ ಕಾಯ್ದೆ ರೂಪಿಸಲು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಇಂದು ಬೃಹತ್ ಪ್ರತಿಭಟನೆ ನಡೆಸಿತು. ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿರುವ ಜಿಲ್ಲಾಡಳಿತ ಭವನದ ಮುಂದೆ ಕರವೇ ಪ್ರತಿಭಟನೆ ನಡೆಸಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಆಗಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಅರ್. ಲೋಕೇಶ್, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕನ್ನಡಿಗರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಕನ್ನಡಿಗರು ನಿರುದ್ಯೋಗದಿಂದ ಬಳಲುತ್ತಿದ್ದು, ಉದ್ಯೋಗ ಆರಿಸಿ ರಾಜ್ಯ ಬಿಟ್ಟು ಹೊರ ರಾಜ್ಯಗಳಲ್ಲಿ ಹೋಗಿ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕದಲ್ಲಿ ಹಲವಾರು ಕಂಪನಿಗಳು ಕನ್ನಡಿಗರಿಗೆ ಹೆಚ್ಚಿನ ಅಧ್ಯತೆ ನೀಡದೆ.. ಹೊರಗಿನವರನ್ನು ಕರೆತಂದು ಕೆಲಸಕ್ಕೆ ಇಟ್ಟುಕೊಳ್ಳುತ್ತಿದ್ದಾರೆ ಹಾಗಾಗಿ ಕನ್ನಡಿಗರಿಗೆ ವಂಚನೆ ಆಗುತ್ತಿದ್ದು, ಕನ್ನಡಿಗರಿಗಾಗಿ ಹೊಸ ಕಾಯ್ದೆ ತಂದು ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಕೆಲಸ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಚಿಕ್ಕಬಳ್ಳಾಪುರ ಕರವೇ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಬಾಲಕೃಷ್ಣ ಮಾತನಾಡಿ, ಕರವೇ ನಾರಾಯಣಗೌಡರ ಅದೇಶದಂತೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಕಾಯ್ದೆ ಜಾರಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ತಾಲೂಕುಗಳ ಕರವೇ ಹೋರಾಟ ಗಾರರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರ ಕನ್ನಡಿಗರಿಗಾಗಿ ಹೊಸ ಕಾಯ್ದೆ ತಂದು ಕೆಲಸ ಕೊಡಲು ಮುಂದಾಗುoತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರಾದ ವಿನೋದ್ ಕುಮಾರ್, ಹರೀಶ್ ಕುಮಾರ್, ಮುನಿರಾಜು, ಶಬೀರ್, ವೆಂಕಟರಮಣಪ್ಪ, ಯಾದವ್, ಶ್ರೀಧರ್ ರೆಡ್ಡಿ, ಚೇತನ್ ಕುಮಾರ್ ಭಾಗಿಯಾಗಿದ್ದರು.