ವಿಜಯಪುರದಲ್ಲಿ ಈಡೀಸ್ ಸೊಳ್ಳೆಗಳ ಲಾರ್ವಾ ಸಮೀಕ್ಷೆ
1 min readಡೆಂಘೀ ನಿಯಂತ್ರಣಕ್ಕೆ ಲಾರ್ವಾ ಉತ್ಪತ್ತಿ ತಾಣ ನಾಶ ಮಾಡಿ
ವಿಜಯಪುರದಲ್ಲಿ ಈಡೀಸ್ ಸೊಳ್ಳೆಗಳ ಲಾರ್ವಾ ಸಮೀಕ್ಷೆ
ಪ್ರಸ್ತುತ ಮಳೆಗಾಲವಾಗಿದ್ದು, ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈಡಿಸ್ ಸೊಳ್ಳೆ ಉತ್ಪತ್ತಿ ತಾಣ ನಾಶಕ್ಕೆ ವಿಜಯಪುರದಲ್ಲಿ ಇಂದು ಲಾರ್ವಾ ಸಮೀಕ್ಷೆ ಮಾಡಲಾಗುತ್ತಿದೆ ಎಂದು ನಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಗೌಡ ಹೇಳಿದರು.
ಪ್ರಸ್ತುತ ಮಳೆಗಾಲವಾಗಿದ್ದು, ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈಡಿಸ್ ಸೊಳ್ಳೆ ಉತ್ಪತ್ತಿ ತಾಣ ನಾಶಕ್ಕೆ ವಿಜಯಪುರದಲ್ಲಿ ಇಂದು ಲಾರ್ವಾ ಸಮೀಕ್ಷೆ ಮಾಡಲಾಗುತ್ತಿದೆ ಎಂದು ನಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಗೌಡ ಹೇಳಿದರು. ವಿಜಯಪುರ ೧೩ನೇ ವಾರ್ಡಿನಲ್ಲಿ ಮನೆ ಮನೆ ಭೇಟಿ ಸಮೀಕ್ಷೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುವುದು ಎಂದರು.
ಪ್ರತಿ ಶುಕ್ರವಾರ ಸಾರ್ವಜನಿಕರು ತಮ್ಮ ಮನೆಗಳಲ್ಲಿ, ಕಚೇರಿಗಳಲ್ಲಿ ಸಿಬ್ಬಂದಿ, ಶಾಲಾ ಕಾಲೇಜು ಮುಂತಾದ ಸ್ಥಳಗಳಲ್ಲಿ ನೀರು ಶೇಖರಣೆಯಾಗುವ ಪರಿಕರಗಳನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು. ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ ಡೆಂಘೀ ಜ್ವರ ನಿಯಂತ್ರಣ ದಲ್ಲಿ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶ ಮಾಡುವುದರಿಂದ ಡೆಂಘೀ ನಿಯಂತ್ರಣ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಜುಲೈ ತಿಂಗಳಿನಲ್ಲಿ ಆಚರಿಸುವ ಡೆಂಘೀ ವಿರೋಧ ಮಾಸಾಚರಣೆ ಧ್ಯೇಯವಾಕ್ಯ ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ ಎಂಬುದಾಗಿದೆ. ಈ ಡೆಂಘೀ ಜ್ವರ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಡೆಂಘೀ ನಿಯಂತ್ರಣಕ್ಕೆ ಕೈಜೋಡಿಸಿ ಎಂದು ಅವರು ಕೋರಿದರು. ಆರೋಗ್ಯ ಇಲಾಖೆ ಎಸ್‌ಹೆಚ್‌ಐಓ ಉಮೇಶ್, ಹೆಚ್‌ಐಒ ರಘು, ಚೇತನ್, ಪಿಎಚ್‌ಸಿಓ ಸರಸಮ್ಮ, ಶ್ವೇತಾ, ಲೀಲಾವತಿ, ಅನ್ನಪೂರ್ಣ ಇದ್ದರು.