ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ಬೆಂಗಳೂರು ಉಪನಗರ ರೈಲು ಯೋಜನೆ ಸರ್ವೆ ಶೀಘ್ರ ಪೂರ್ಣಗೊಳಿಸಲು ಮನವಿ

1 min read

ಬೆಂಗಳೂರು ಉಪನಗರ ರೈಲು ಯೋಜನೆ ಸರ್ವೆ ಶೀಘ್ರ ಪೂರ್ಣಗೊಳಿಸಲು ಮನವಿ

ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ ಸಂಸದ ಡಾ.ಕೆ. ಸುಧಾಕರ್

ದೊಡ್ಡಬಳ್ಳಾಪುರ-ಚನ್ನಸಂದ್ರ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣಕ್ಕೆ ಮನವಿ

ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ವೇಗ ಹೆಚ್ಚಿಸಲು ಫೈನಲ್ ಲೊಕೇಶನ್ ಸರ್ವೆ ಶೀಘ್ರ ಪೂರ್ಣಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಅವರು ಈ ಕುರಿತು ಲಿಖಿತ ಮನವಿ ನೀಡಿದ್ದಾರೆ.

ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ವೇಗ ಹೆಚ್ಚಿಸಲು ಫೈನಲ್ ಲೊಕೇಶನ್ ಸರ್ವೆ ಶೀಘ್ರ ಪೂರ್ಣಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಅವರು ಈ ಕುರಿತು ಲಿಖಿತ ಮನವಿ ನೀಡಿದ್ದಾರೆ. ಬೆಂಗಳೂರು ಉಪನಗರ ರೈಲು ಯೋಜನೆಯಲ್ಲಿ ಎಮ್‌ಎಲ್‌ಎಸ್ ನಿರ್ಣಾಯಕವಾಗಿದ್ದು, ಕಾರಿಡಾರ್ 1 ಮತ್ತು 4 ರಲ್ಲಿ ಈ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಅಮೃತ ಭಾರತ ಯೋಜನೆಯಡಿ ನಡೆಯುತ್ತಿರುವ ದೊಡ್ಡಬಳ್ಳಾಪುರ ಮತ್ತು ಚನ್ನಸಂದ್ರ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಕಾಲಮಿತಿ ಹಾಕಿಕೊಂಡು ಶೀಘ್ರ ಪೂರ್ಣಗೊಳಿಸಬೇಕು. ಹೊಸ ರೈಲು ಮಾರ್ಗ ಯೋಜನೆಗಳಾದ ಚಿಕ್ಕಬಳ್ಳಾಪುರ-ಗೌರಿಬಿದನೂರು (44 ಕಿ.ಮೀ.), ಚಿಕ್ಕಬಳ್ಳಾಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ (103 ಕಿ.ಮೀ.), ಶ್ರೀನಿವಾಸಪುರ-ಮದನಪಲ್ಲಿ (75 ಕಿ.ಮೀ.) ಮಾರಿಕುಪ್ಪಂ-ಕುಪ್ಪA (23.7 ಕಿ.ಮೀ.) ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್ 1: ದೇವನಹಳ್ಳಿ-ಯಲಹಂಕ ಮತ್ತು ಕಾರಿಡಾರ್ ೪: ರಾಜಾನುಕುಂಟೆ-ಯಲಹoಕ ಮಾರ್ಗಗಳನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಅವರು ಕೋರಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆದ್ದಾರಿ ಯೋಜನೆಗಳನ್ನು ಜಾರಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಸಂಸದ ಡಾ.ಕೆ.ಸುಧಾಕರ್ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಎನ್‌ಎಚ್-44 ಮತ್ತು ಎನ್‌ಎಚ್-69 ರ ನಡುವೆ ಚತುಷ್ಫಥ ಹೊರವರ್ತುಲ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ/ವಿಸ್ತೃತ ಯೋಜನಾ ವರದಿ ರೂಪಿಸಲು ಒಪ್ಪಿಗೆ ನೀಡಬೇಕು. ಚಿಕ್ಕಬಳ್ಳಾಪುರದಲ್ಲಿ ಎನ್‌ಎಚ್-7ನ ಎಲ್ಸಿ ನಂ. 36 ರಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 40 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಬೇಕು. ಗೌರಿಬಿದನೂರಿನಲ್ಲಿ ಎನ್‌ಎಚ್-9ರಲ್ಲಿ ಚತುಷ್ಪಥ ರೈಲು ಮೇಲ್ಸೇತುವೆ ನಿರ್ಮಿಸಲು 75 ಕೋಟಿ ರೂ. ಅನುದಾನ ನೀಡಬೇಕು. ಎನ್‌ಎಚ್-234 ರ ಅಗಲೀಕರಣದಿಂದ ಪ್ರಯಾಣದ ಅವಧಿ ಹಾಗೂ ದಟ್ಟಣೆ ಕಡಿಮೆಯಾಗಲಿದ್ದು, ಈ ಕುರಿತು ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

 

About The Author

Leave a Reply

Your email address will not be published. Required fields are marked *