ಗೌರಿಬಿದನೂರಿನಲ್ಲಿ ಜನತಾದರ್ಶನ ಕಾರ್ಯಕ್ರಮ
1 min readಗೌರಿಬಿದನೂರಿನಲ್ಲಿ ಜನತಾದರ್ಶನ ಕಾರ್ಯಕ್ರಮ
೩೦ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆ, ಪರಿಹರಿಸಲು ಸೂಚನೆ
ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ
ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಹವಾಲುಗಳಿಗೆ ಅಧಿಕಾರಿಗಳಿಂದ ಸೂಕ್ತ ಸ್ಪಂಧನೆ ನೀಡಲು ಜನತಾದರ್ಶನ ನಾಗರಿಕರಿಗೆ ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಹವಾಲುಗಳಿಗೆ ಅಧಿಕಾರಿಗಳಿಂದ ಸೂಕ್ತ ಸ್ಪಂಧನೆ ನೀಡಲು ಜನತಾದರ್ಶನ ನಾಗರಿಕರಿಗೆ ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು. ಗೌರಿಬಿದನೂರು ನಗರ ಹೊರವಲಯದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜನತಾ ದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಈ ಬಾರಿ ಮುಂಗಾರಿನ ಆರಂಭದಲ್ಲಿ ಜಿಲ್ಲೆಯ ಬಹುತೇಕ ಭಾಗದಲ್ಲಿ ಹೆಚ್ಚು ಮಳೆ ಆಗುತ್ತಿದೆ. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸಮರ್ಪಕವಾಗಿ ಪೂರೈಕೆಯಾಗಬೇಕು. ಈಗಾಗಲೇ ಸಂಬoಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯತಿ ತೀವ್ರ ನಿಗಾ ವಹಿಸಬೇಕು. ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಆರೋಗ್ಯ ಇಲಾಖೆ ಸಹಯೋಗದಲ್ಲಿ ಈಡಿಸ್ ಸೊಳ್ಳೆಯ ಲಾರ್ವ ಸರ್ವೇ ಮಾಡುವ ಕೆಲಸ ಚುರುಕು ಗೂಂಡಿದೆ ಎಂದರು.
ಕoದಾಯ ಮತ್ತು ಇತರೆ ಇಲಾಖೆಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸವಾಗಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು. ಕಾರ್ಯಕ್ರಮದಲ್ಲಿ ನಾಗರಿಕರಿಂದ 30ಕ್ಕೂ ಹೆಚ್ಚು ಅಹವಾಲುಗಳು ಬಂದಿದ್ದು, ಸಂಬoಧ ಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್.ಜಿ ನಿಟ್ಟಾಲೆ, ಉಪ ವಿಭಾಗಾಧಿಕಾರಿ ಅಶ್ವಿನಿ, ತಹಸೀಲ್ದಾರ್ ಮಹೇಶ್ ಎಸ್ ಪತ್ರಿ ತಾಪಂ ಇಒ ಜಿಕೆ ಹೊನ್ನಯ್ಯ, ನಗರ ಸಭೆ ಆಯುಕ್ತ ಡಿ.ಎಂ ಗೀತಾ, ಬಿ.ಇಂ ಕೆ ವಿ ಶ್ರೀನಿವಾಸ್, ಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಎಸ್ ಎಂ ಮೋಹನ್ ಭಾಗವಹಿಸಿದ್ದರು.