ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

‘ಮೇಸ್ಟ್ರು’ ಆದ ‘ಸಿಎಂ ಸಿದ್ಧರಾಮಯ್ಯ’: ‘ಶಾಲಾ ವಿದ್ಯಾರ್ಥಿ’ಗಳಿಗೆ ‘ಕನ್ನಡ ವ್ಯಾಕರಣ ಪಾಠ’

1 min read

ಇಂದು ಸಿಎಂ ಸಿದ್ಧರಾಮಯ್ಯ ಶಿಕ್ಷಕರಾದರು. ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರ ಕನ್ನಡ ವ್ಯಾಕರಣದ ಪಾಠ ಕೇಳಿದಂತ ಮಕ್ಕಳಂತೂ ಚಪ್ಪಾಳೆಗಳ ಮಹಾಪೂರವನ್ನೇ ಹರಿಸಿದರು. ಅದು ಎಲ್ಲಿ ಅಂತ ಮುಂದೆ ಓದಿ.

ಬೆಂಗಳೂರಿನ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿ ನೀಡಿದರು.

SCSP/TSP ಸಭೆಯ ಬಳಿಕ ನೇರವಾಗಿ ಭೇಟಿ ನೀಡಿದರು.

ಮುಖ್ಯಮಂತ್ರಿಗಳು ಗಮನಿಸಿದ ಲೋಪಗಳು…

250 ವಿದ್ಯಾರ್ಥಿಗಿರುವ ಶಾಲೆ

*ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವರ ಭೇಟಿ. ವಿದ್ಯಾರ್ಥಿಗಳೊಂದಿಗೆ ಸಿಎಂ ಸಮಾಲೋಚನೆ.

*ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದ ವಿದ್ಯಾರ್ಥಿಗಳು.

*ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ…ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ ವಿದ್ಯಾರ್ಥಿಗಳು. ಆಗಾಗ ಪಲಾವ್ ಕೊಡ್ತಾರೆ ಎಂದು ಖುಷಿಪಟ್ಟ ವಿದ್ಯಾರ್ಥಿಗಳು.

ಕಳೆದ ಬಾರಿ SSLC ಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರ ವಿವರಣೆ

*ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ಸಿಎಂ ಗೆ ತಿಳಿಸಿದ ವಿದ್ಯಾರ್ಥಿಗಳು…

ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, MLC ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.‌

ಅಕ್ಷರಗಳು ಎಡಬಿಡದೆ ಸೇರುವುದೇ ಸಂದಿ: ಮಕ್ಕಳಿಗೆ ಸಿಎಂ ಸಿದ್ಧರಾಮಯ್ಯ ವ್ಯಾಕರಣ ಪಾಠ

ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಸಿದ್ಧರಾಮಯ್ಯ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಮಾಡಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

ಮಕ್ಕಳಿಗೆ ಬಸವಣ್ಣನವರ ಮಹತ್ವ ತಿಳಿಸಿದ ಸಿಎಂ

ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಸಿಎಂ ಸಿದ್ಧರಾಮಯ್ಯ ಕೇಳಿದರು. ಅಗ ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದ ಬಸವಣ್ಣನವರು…ಎಂದು ಸಿಎಂ ತಾವೇ ಮಕ್ಕಳಿಗೆ ಉತ್ತರಿಸಿದರು.

ವಿದ್ಯಾರ್ಥಿಗಳೊಂದಿಗೆ ಊಟ ಸೇವಿಸಿದ ಸಿಎಂ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯ ಅವರು ಚಾಮರಾಜಪೇಟೆಯ ಮೂರಾರ್ಜಿ ದೇಸಾಯಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದ ಬಳಿಕ, ಮಧ್ಯಾಹ್ನದ ಹೊತ್ತಾಗಿದ್ದರಿಂದ ಅಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.

About The Author

Leave a Reply

Your email address will not be published. Required fields are marked *