ನಿಮ್ಹಾನ್ಸ್ ಆವರಣದಲ್ಲಿ ಪಾಲಿಟ್ರಾಮಾ ಸ್ಥಾಪಿಸಿ: ಕೇಂದ್ರ ಆರೋಗ್ಯ ಸಚಿವರಿಗೆ ಡಾ.ಸಿ.ಎನ್. ಮಂಜುನಾಥ್ ಮನವಿ
1 min readನಿಮ್ಹಾನ್ಸ್ ಆವರಣದಲ್ಲಿ 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಹಾಗೂ ಸ್ನಾತಕೋತ್ತರ ಸಂಸ್ಥೆ ಸ್ಥಾಪಿಸಲು ಮಂಜೂರಾತಿ ನೀಡುವಂತೆ ಸಂಸದ ಡಾ. ಸಿ.ಎನ್. ಮಂಜುನಾಥ್ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಪಾಲಿಟ್ರಾಮಾ ಕುರಿತು ಪ್ರಸ್ತಾವನೆ ಸಲ್ಲಿಸಿ, ಪಾಲಿಟ್ರಾಮಾ ಕೇಂದ್ರವು ಬಡ ರೋಗಿಗಳಿಗೆ ಕೈಗೆಟುಕುವ ವೆಚ್ಚದಲ್ಲಿ ಸಕಾಲದಲ್ಲಿ ಚಿಕಿತ್ಸೆ ಒದಗಿಸಲು ನೆರವಾಗಲಿದೆ ಎಂದು ತಿಳಿಸಿದರು.
ನಿಮ್ಹಾನ್ಸ್‌ನಲ್ಲಿ ಹೊರರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಆಸ್ಪತ್ರೆಗೆ ಹೆಚ್ಚಾಗಿ ಬಡ ಮತ್ತು ಮಧ್ಯಮ ವರ್ಗದವರೇ ಹೆಚ್ಚಿಗೆ ಬರುತ್ತಾರೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ಪಡೆಯಲಾಗದೆ ದೂರದ ಊರುಗಳಿಂದ ಬಂದವರಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.
ರಸ್ತೆ ಅಪಘಾತಗಳು ದೇಶದಲ್ಲಿ ಸಾವಿಗೆ ಐದನೇ ಪ್ರಮುಖ ಕಾರಣವಾಗಿದ್ದು, ಬಹು ಗಾಯಗಳಿರುವ ರೋಗಿಗಳಿಗೆ ಗೋಲ್ಡನ್ ಅವರ್‌ನಲ್ಲಿ ತಕ್ಷಣದ ಚಿಕಿತ್ಸೆಯ ಅಗತ್ಯವಿರುತ್ತದೆ. ಶೇ.13 ಸಾವುಗಳು ರಸ್ತೆ ಅಪಘಾತಗಳಿಂದ ಸಂಭವಿಸುತ್ತವೆ. ಸ್ಥಳಾವಕಾಶದ ಕೊರತೆ ಮತ್ತು ಪಾಲಿಟ್ರಾಮಾ ಸೇವೆಗಳ ಲಭ್ಯತೆಯಿಲ್ಲದ ಕಾರಣ, ನಿರ್ಣಾಯಕ ರೋಗಿಗಳನ್ನು ನಿಮ್ಹಾನ್ಸ್‌ನಿಂದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ. ಅವರಲ್ಲಿ ಕೆಲವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪುತ್ತಾರೆ ಎಂದು ವಿವರಿಸಿದರು.
ನಿಮ್ಹಾನ್ಸ್ ಆವರಣದಲ್ಲಿ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಯಾಗಬೇಕು ಎನ್ನುವುದು ರಾಜ್ಯದ ಜನರ ಬಹುಕಾಲದ ಕನಸಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈಗಾಗಲೇ 37 ಎಕರೆ ಜಮೀನು ಮಂಜೂರು ಮಾಡಿದೆ. ಮೇಲ್ಕಂಡ ಪ್ರಸ್ತಾವನೆಯನ್ನು ಸಂಸ್ಥೆಯ ಆಡಳಿತ ಮಂಡಳಿಯು ಹಲವು ಪರಿಷ್ಕರಣೆ ಮತ್ತು ಮರು ಪರಿಷ್ಕರಣೆಗಳೊಂದಿಗೆ ಅನುಮೋದಿಸಿದೆ. ಆದರೂ 11 ವರ್ಷಗಳಿಂದ ಯಾವುದೇ ಪ್ರಗತಿಯಾಗಿಲ್ಲ. ಈ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಸಲ್ಲಿಸಲಾಗಿದ್ದು ಅಂದಾಜು ವೆಚ್ಚ 498 ಕೋಟಿ ರೂ. ಆಗಲಿದೆ. ಇದರಲ್ಲಿ ನಾಗರಿಕ ನಿರ್ಮಾಣ, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳು ಸೇರಿವೆ ಎಂದು ಕೇಂದ್ರ ಸಚಿವರಿಗೆ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.
ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉಪಸ್ಥಿತರಿದ್ದರು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday