ಡೆಂಘೀ, ಚಿಕೂನ್ ಗುನ್ಯಾ ತಡೆ ಸಭೆ ನಡೆಸಿದ ಶಾಸಕ ದರ್ಶನ್
1 min readಕುಡಿಯುವ ನೀರು, ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ
ಡೆಂಘೀ, ಚಿಕೂನ್ ಗುನ್ಯಾ ತಡೆ ಸಭೆ ನಡೆಸಿದ ಶಾಸಕ ದರ್ಶನ್
ದರ್ಶನ್ ಧುವನಾರಾಯಣ್‌ರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ, ಸೊಳ್ಳೆಗಳ ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲೂಕು ಕಚೇರಿ ಆವರಣದಲ್ಲಿ ನಡೆದ ಡೆಂಘೀ ಮತ್ತು ಚಿಕೂನ್ ಗುನ್ಯಾ ತಡೆ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು.
ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ, ಸೊಳ್ಳೆಗಳ ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲೂಕು ಕಚೇರಿ ಆವರಣದಲ್ಲಿ ನಡೆದ ಡೆಂಘೀ ಮತ್ತು ಚಿಕೂನ್ ಗುನ್ಯಾ ತಡೆ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿಯಿoದ ಗ್ರಾಮಗಳ ವ್ಯಾಪ್ತಿಯಲ್ಲಿ ಬೇವಿನ ಸೊಪ್ಪಿನ ಹೊಗೆ ಶಾಸಕರು ಸಿಂಪಡಿಸುವತೆ ಸೂಚಿಸಿದರು.
ಗ್ರಾಮಾಂತರ ಮತ್ತು ಪಟ್ಟಣದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಈಗಾಗಲೇ ನಗರಸಭೆ, ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರು ಶುದ್ಧವಾಗಿಲ್ಲದಿರುವ ಬಗ್ಗೆ ಆರೋಗ್ಯಧಿಕಾರಿಯಿಂದ ಮಾಹಿತಿ ಲಭ್ಯವಿದ್ದು, ಕುಡಿಯುವ ನೀರಿಗೆ ತೊಂದರೆಯಾಗದoತೆ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸೊಳ್ಳೆಗಳು ನೀರು ನಿಲ್ಲುವ ಗುಂಡಿಗಳು, ಪ್ಲಾಸ್ಟಿಕ್ ವಸ್ತುಗಳು, ಟೈರ್‌ಗಳಲ್ಲಿ ನಿಲ್ಲುವ ನೀರಿನಲ್ಲಿ ಹೆಚ್ಚಾಗಿ ಸಂತಾನೋತ್ಪತ್ತಿಯನ್ನು ಮಾಡುವ ಕಾರಣ ಕಸಕಡ್ಡಿಗಳು ಕಾಣದಂತೆ ತೆರುವುಗೊಳಿಸಬೇಕು ಎಂದರು. ಈಗಾಗಲೇ ಬೆಂಗಳೂರಿನಲ್ಲಿ ವ್ಯಾಪಕವಾಗಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ತಾಲೂಕಿನಲ್ಲಿ ಸುಮಾರು 23 ಡೆಂಘೀ ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಈ ವರದಿಯನ್ನು ಗಮನಿಸಿದರೆ ಈ ಕ್ಷಣದಿಂದ ಎಚ್ಚರ ವಹಿಸಬೇಕಾಗುತ್ತದೆ ಎಂದರು.
ಆಯಾ ಗ್ರಾಮದ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗೆ ಸೊಳ್ಳೆಗಳ ನಿಯಂತ್ರಣ ಮತ್ತು ಡೆಂಘೀ ಪ್ರಕರಣದ ಬಗ್ಗೆ ಗ್ರಾಪಂ ಪಿಡಿಒ ಮತ್ತು ಅಧ್ಯಕ್ಷರು ಗ್ರಾಮಸ್ಥರಲ್ಲಿ ಅರಿವು ಮೂಡಿಸಿ, ಡೆಂಘೀ ಹರಡದಂತೆ ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿದರು. ನಿನ್ನೆ ನಂಜನಗೂಡಿನಲ್ಲಿ ಜಿಲ್ಲಾಧಿಕಾರಿಗಳಿಂದ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರಿಂದ ತಾಲೂಕಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿರುವ ಬಗ್ಗೆ ಹಲವು ದೂರುಗಳು ದಾಖಲಾಗಿವೆ ಎಂದು ಶಸಾಕರು ಅಸಮಾಧಾನ ಹೊರ ಹಾಕಿದರು.
ಇದಕ್ಕೆ ಸಂಬoಧಿಸಿ ಸರಿಯಾಗಿ ಕೆಲಸ ನಿರ್ವಹಿಸಿದ ಪ್ರಕರಣಗಳು ಮತ್ತೆ ಕಂಡು ಬಂದರೆ ಅಂತಹ ಗ್ರಾಪಂ ಪಿಡಿಒಗಳು ಮತ್ತು ಸಂಬoಧಪಟ್ಟ ಯಾವುದೇ ಅಧಿಕಾರಿಯಾದರೂ ಸರಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ದರ್ಶನ್ ದ್ರುವ ನಾರಾಯಣ್ ಅಧಿಕಾರಿಗಳಿಗೆ ಸಭೆಯಲ್ಲಿಯೇ ಎಚ್ಚರಿಕೆ ನೀಡಿದರು.