ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದ ಸೋಮಣ್ಣ
1 min readತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದ ಸೋಮಣ್ಣ
ಕೇಂದ್ರ ಸಚಿವರಿಗೆ ಗುಬ್ಬಿ ಪಟ್ಟಣದಲ್ಲಿ ಅದ್ಧೂರಿ ಅಭಿನಂದನೆ
ಜಿಲ್ಲೆಯಲ್ಲಿ ಬಯಸದೆ ಇರುವ ಭಾಗ್ಯ ಬಯಸಿ ಬಂದಿದೆ, ತುಮಕೂರು ಜಿಲ್ಲೆ ಹಾಗೂ ಜನರಿಗೆ ಅಧಾರಿಯಾಗಿದ್ದೇನೆ, ಗುಬ್ಬಿ ತಾಲೂಕಿನ ಹಾಗಲವಾಡಿ ಮತ್ತಿತರ ಗ್ರಾಮಗಳ ಏತ ನಿರಾವರಿ ಸರಿಪಡಿಸುವ ಕೆಲಸ ಮಾಡುತ್ತೇನೆ, ಸರ್ಕಾರ ನಿಂತ ನಿರಲ್ಲ ಹರಿಯೋ ನೀರು, ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಅವರೊಂದಿಗೆ ಈಗಾಗಲೇ ಮಾತನಾಡಿದ್ದು, ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.
ಗುಬ್ಬಿ ನಗರದ ಗೋಸಲ ಚನ್ನಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಜೆ,ಡಿಎಸ್ ಕಾರ್ಯಕರ್ತರು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದ್ದರು.
ಈ ವೇಳೆ ಮಾತನಾಡಿದ ವಿ. ಸೋಮಣ್ಣ, ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಗೊಂದಲ ಬೇಡ, ಜನರ ನಂಬಿಕೆ ಉಳಿಸುವ ಕೆಲಸ ಮಾಡೋಣ. ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಬಗ್ಗೆ ಮುಖ್ಯ ಮಂತ್ರಿಗಳು ಮತ್ತು ಉಸ್ತುವಾರಿ ಸಚಿವರ ಬಳಿ ಮಾತನಾಡಿ, ವಾಸ್ತವಾಂಶ ತಿಳಿಸಿದ್ದೇನೆ. ತುಮಕೂರು ಜಿಲ್ಲೆಯ ಜನರ ನೋವು ಅರ್ಥ ಮಾಡಿಕೊಂಡಿದ್ದೇನೆ, ರಾಜ್ಯ ಸರ್ಕಾರ ಒಂದು ಜಿಲ್ಲೆಗೆ ಅನ್ಯಾಯ ಮಾಡಿ ಇನ್ನೊಂದು ಜಿಲ್ಲೆಗೆ ನೀರು ತೆಗೆದುಕೊಂಡು ಹೋಗುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದರು.
ಗುಬ್ಬಿ ಬಿಜೆಪಿ ಮುಖಂಡ ಎಸ್‌ಡಿ ದಿಲೀಪ್ ಕುಮಾರ್ ಮಾತನಾಡಿ, ನಿಟ್ಟೂರ್, ಹಾಗಲವಾಡಿ ಹೋಬಳಿಗಳಿಗೆ ಹೇಮಾವತಿ ನೀರು ಹರಿಸಿಕೊಡಿ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಬಿ ಎಸ್ ನಾಗರಾಜು, ಕಳ್ಳಿಪಾಳ್ಯ ಲೋಕೇಶ್, ಎಚ್ ಟಿ ಭೈರಪ್ಪ, ಚಂದ್ರಶೇಖರ್ ಬಾಬು, ನಿಂಗಪ್ಪ, ಯತೀಶ್, ಜಿ ಆರ್ ಶಿವಕುಮಾರ್ ಇದ್ದರು.