ಮೈಸೂರಿನ ಮುಡಾ ಹಗರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹುನ್ನಾರ
1 min readಮೈಸೂರಿನ ಮುಡಾ ಹಗರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹುನ್ನಾರ
ಮೈಸೂರಿನಿಂದ ಹೆಲಿಕಾಪ್ಟರ್‌ನಲ್ಲಿ ತಂದ ದಾಖಲೆ ಸಚಿವ ಭೈರತಿ ಸುರೇಶ್ ಎಲ್ಲಿಟ್ಟಿದ್ದಾರೋ?
ಚನ್ನಪಟ್ಟಣದಲ್ಲಿ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ
ಮೈಸೂರಿನ ಮುಡಾ ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರಕಾರ ಹುನ್ನಾರ ನಡೆಸಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಡೀ ಹಗರಣದ ಸುತ್ತಮುತ್ತ ನಡೆಯುತ್ತಿರುವ ಘಟನೆಗಳು, ಈಗಲೂ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂದರೆ ತಪ್ಪಲ್ಲ. ಆದರೆ, ಈ ಹಗರಣವನ್ನು ಮುಚ್ಚಿಹಾಕಲು ಸರ್ಕಾರವೇ ಹೊರಟಿದೆ. ಇದು ಅರ್ಕಾವತಿ ರೀಡೂ ಹಗರಣದಂತೆ ಇದೆ ಎಂದು ದೂರಿದರು.
ಮೈಸೂರಿನ ಮುಡಾ ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರಕಾರ ಹುನ್ನಾರ ನಡೆಸಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಹಗರಣವೇ ನಡೆದಿಲ್ಲ ಎಂದು ಹೇಳಿದ್ದಾರೆ. ಆದರೆ, ಮೈಸೂರಿಗೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹೋಗಿ ಕಂತೆಗಟ್ಟಲೇ ಕಡತಗಳನ್ನು, ದಾಖಲೆಗಳನ್ನು ತುಂಬಿಕೊoಡು ತಂದವರು ಯಾರು? ಸಚಿವ ಭೈರತಿ ಸುರೇಶ್ ಅವರೇ ತಾನೇ ಎಂದು ಕೇಂದ್ರ ಸಚಿವರು ನೇರ ಆಪಾದನೆ ಮಾಡಿದರು.
ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ಪಿತೂರಿ ಇದೆ ಅಂತಿದಾರೆ, ಈ ರೀತಿ ನಡೆದೇ ಇಲ್ಲ ಅಂತಾರೆ. ಹಾಗಾದರೆ ಅಧಿಕಾರಿಗಳನ್ನು ಕಳಿಸಿ ಯಾಕೆ ತನಿಖೆ ಮಾಡ್ತಿದಾರೆ. ದಿಢೀರ್ ವರ್ಗಾವಣೆಗಳು ಯಾಕೆ ಆಗುತ್ತಿವೆ? ವರ್ಗಾವಣೆಗೆ ಗುರಿಯಾದ ಅಧಿಕಾರಿ ಈ ಹಗರಣದ ಬಗ್ಗೆ ಸರ್ಕಾರಕ್ಕೆ ಎಷ್ಟು ಸಲ ದೂರು ನೀಡಿದ್ದರು? ಎಷ್ಟು ಕಡತಗಳನ್ನು, ದಾಖಲೆಗಳನ್ನು ಕಳಿಸಿದ್ದರು ಎಂಬ ಬಗ್ಗೆ ಹಾದಿಬೀದಿಯಲ್ಲಿ ಚರ್ಚೆ ಆಗುತ್ತಿದೆ ಎಂದು ಅವರು ಹೇಳಿದರು.
ಮೈಸೂರಿನಿಂದ ಹೆಲಿಕಾಪ್ಟರ್‌ನಲ್ಲಿ ತಂದ ದಾಖಲೆಗಳನ್ನು ಭೈರತಿ ಸುರೇಶ್ ಎಲ್ಲೆಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಮಾಹಿತಿ ಜನರಿಗೆ ಗೊತ್ತಾಗಬೇಕು ಎಂದು ಅವರು ಹೇಳಿದರು. ಹಿಂದೆ ಅರ್ಕಾವತಿ ರೀಡೂ ಹಗರಣ ನಡೆಯಿತಲ್ಲಾ? ಅದು ಎಲ್ಲಿಗೆ ಮುಟ್ಟಿತು? ಅದಕ್ಕೊಂದು ಆಯೋಗ ಮಾಡಿಕೊಂಡು ಹಗರಣ ಮುಚ್ಚಿ ಹಾಕಿದರಲ್ಲವೇ? ಮುಡಾದಲ್ಲಿ 14 ನಿವೇಶನಗಳನ್ನು ಅಧಿಕಾರಿಗಳು ಇವರಿಗೆ ರೆಡ್ ಕಾರ್ಪೆಟ್ ಹಾಕಿ ಕೊಟ್ಟಿದ್ದಾರೆ ಪಾಪ. ಇವರ ಭೂಮಿಗೆ ಬದಲಾಗಿ ಇವರಿಗೆ ನಿವೇಶನಗಳನ್ನು ಹಂಚಿದ್ದಾರoತೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಇವರ ಜಮೀನಿಗೆ 32 ಕೋಟಿ ಬೆಲೆ ಕಟ್ಟಿಕೊಂಡಿದ್ದಾರೆ. ಅದರ ಬಗ್ಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅದರ ಬಗ್ಗೆ ನಾನು ಮಾತಾಡಲ್ಲ. ಅವರ ಸಂಪುಟದ ಸದಸ್ಯರೇ ಮಾತನಾಡಲು ರೆಡಿ ಇದ್ದಾರೆ ಎಂದು ಟಾಂಗ್ ಕೊಟ್ಟರು. ಶುಕ್ರವಾರ ಒಬ್ಬರು ಕುಮಾರಸ್ವಾಮಿಗೆ ಹುಚ್ಚು ಹಿಡಿದಿದೆ, ಚಿಕಿತ್ಸೆ ಕೊಡಿಸಬೇಕು ಎಂದು ರ್ಮಾನು ಹೊರಡಿಸಿದ್ದಾರೆ. ನಾನು ನೋಡಿದರೆ ಹಾಗೆ ಕಾಣುತ್ತೇನೆಯೇ? ಜನರು ನನ್ನನ್ನು, ಆ ವ್ಯಕ್ತಿಯನ್ನು ಸೂಕ್ಷವಾಗಿ ಗಮನಿಸಲಿ. ಹುಚ್ಚು ಯಾರಿಗೆ ಇದೆ ಎಂಬುದು ಗೊತ್ತಾಗುತ್ತದೆ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು.
ನನ್ನ ಆರೋಗ್ಯದ ಬಗ್ಗೆ ಅವರಿಗೆ ಚಿಂತೆ ಬೇಡ. ನನಗೆ ಹೃದಯದ ಸಮಸ್ಯೆ ಇತ್ತು. ವಾಲ್ವ್ ರೀಪ್ಲೇಸ್ಮೆಂಟ್ ಮಾಡಿಸಬೇಕಿತ್ತು. ಅದನ್ನು ಮಾಡಿಸಿಕೊಂಡಿದ್ದೇನೆ. ನನ್ನ ಬಗ್ಗೆ ಅವರಿಗೆ ಯಾಕೆ ಚಿಂತೆ? ಎಂದು ಅವರು ಕೇಳಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಲು ಹಲವಾರು ಹೆಸರುಗಳು ಚರ್ಚೆಯಲ್ಲಿವೆ. ಅಂತಿಮವಾಗಿ ಕಾರ್ಯಕರ್ತರ ಅಭಿಪ್ರಾಯದಂತೆ ತೀರ್ಮಾನ ಮಾಡುತ್ತೇವೆ. ಕಾದು ನೋಡಿ, ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ಬಿಜೆಪಿ ದೆಹಲಿ, ರಾಜ್ಯದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ನಾನು ನನ್ನ ಕಾರ್ಯಕರ್ತರ ಅಭಿಪ್ರಾಯ ಪಡೆಯಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ತೀರ್ಮಾನ ಮಾಡಬೇಕು. ಅಭ್ಯರ್ಥಿ ಬಗ್ಗೆ ಬಿಜೆಪಿ ಕೇಂದ್ರದ ನಾಯಕರ ಜತೆ ಯಾಗಲಿ, ರಾಜ್ಯದ ನಾಯಕರ ಜತೆ ಇನ್ನೂ ಚರ್ಚೆ ಮಾಡಿಲ್ಲ. ನನ್ನ ಕಾರ್ಯಕರ್ತರ ಸಹಮತ ಇಲ್ಲದೇ ಯಾವುದನ್ನೂ ತೀರ್ಮಾನ ಮಾಡಲು ಆಗಲ್ಲ. ಯೋಗೇಶ್ವರ್ ಅವರು ಆ ಕ್ಷೇತ್ರದಲ್ಲಿ ಹಿಂದೆ ಶಾಸಕರಾಗಿದ್ದವರು. ಆದರೆ ಅಂತಿಮವಾಗಿ ಎಲ್ಲರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ ಇರಿಸಿದ್ದ ಹಣವನ್ನು ಈ ಸರಕಾರ ಲೂಟಿ ಮಾಡಿ, ಆಯಾ ಜನರ ಬೆನ್ನಿಗೆ ಚೂರಿ ಹಾಕಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಒಂದೆಡೆ ಎಸ್ಸಿ ಎಸ್ಟಿ ಜನರ ಹಣವನ್ನು ಪಕ್ಷದ ರಾಜ್ಯಗಳಿಗೆ ಸಾಗಿಸಿ ಲಪಟಾಯಿಸಿದ್ದಾರೆ. ಇನ್ನೊಂದು ಕಡೆ 2024-2025 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ 39,121.46 ಕೋಟಿ ವೆಚ್ಚ ಮಾಡುವ ಕ್ರಿಯಾ ಯೋಜನೆ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚು ಹಣವನ್ನು ಎಸ್ಸಿ ಎಸ್ಟಿ ಜನರಿಗೆ ಅಲ್ಲಿನ ಸರ್ಕಾರಗಳು ಮೀಸಲಿಟ್ಟಿವೆ ಎಂದು ಕುಮಾರಸ್ವಾಮಿ ಹೇಳಿದರು.
ಮಧ್ಯಪ್ರದೇಶದಲ್ಲಿ 3,65,000 ಕೋಟಿಯಷ್ಟು ಬಜೆಟ್‌ನಲ್ಲಿ 40,000 ಕೋಟಿಯಷ್ಟು ಹಣವನ್ನು ಎಸ್ಸಿಪಿ, ಎಸ್ ಟಿ ಪಿ ಯೋಜನೆಗೆ ಮೀಸಲಿಟ್ಟಿದ್ದಾರೆ. ನೀವು ಒಬ್ಬರೇ ಅಲ್ಲ ಎಸ್ಸಿಪಿ ಎಸ್ಟಿಪಿಗೆ ಹಣ ಇಟ್ಟಿರುವುದು. ಒಂದು ಕಡೆ ಎಲ್ಲಾ ಕಡೆ ಬೆಲೆ ಏರಿಕೆ ಮಾಡುತ್ತಾರೆ, ಇನ್ನೊಂದು ಕಡೆ ಹಣ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಯಾವ ಸೀಮೆ ನ್ಯಾಯ ಎಂದು ಅವರು ಪ್ರಶ್ನೆ ಮಾಡಿದರು. ಈ ಕಾರ್ಯಕ್ರಮಕ್ಕೆ ಬೇರೆ ಯಾವ ರಾಜ್ಯದಲ್ಲಿಯೂ, ಅದರಲ್ಲಿಯೂ ಬಿಜೆಪಿ ಆಡಳಿತ ಇರುವ ಯಾವ ರಾಜ್ಯದಲ್ಲಿಯೂ ಅನುದಾನ ನೀಡಿಲ್ಲ ಎಂದು ಸಿಎಂ ಹೇಳಿದ್ದಾರೆ. ಇದರ ಬಗ್ಗೆ ಮಾಹಿತಿ ತರಿಸಿಕೊಂಡು ನೋಡಬೇಕು ಮುಖ್ಯಮಂತ್ರಿಗಳು. ಏನೋ ನಾವು ಮಾತ್ರವೇ ಕೊಟ್ಟಿದ್ದೇವೆ ಎಂದು ಬೆನ್ನು ತಟ್ಟಿಕೊಂಡಿದ್ದೀರಲ್ಲ, ಇದು ಸುಳ್ಳು ಎಂದು ಕೇಂದ್ರ ಸಚಿವರು ಹೇಳಿದರು.
ಗ್ಯಾರಂಟಿಗಳಿಗೆ ಹಣ ಬೇಕು ಎಂದು ಈ ಸರ್ಕಾರ ಅನೇಕ ಜನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಹಾಲಿನ ದರ ಏರಿಕೆ ಮಾಡಿದ್ದಾರೆ. ಆದರೆ ಆ ಬಗ್ಗೆ ಜನರಿಗೆ ಸ್ಪಷ್ಟತೆ ಇಲ್ಲ. ಹಾಲಿನ ಪ್ರಮಾಣ ಹೆಚ್ಚಿಸಿ ದರ ಏರಿಕೆ ಮಾಡಿ ಎಂದು ಜನರು ಇವರನ್ನು ಕೇಳಿದ್ದರೇ? ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗಿದೆ. ಈಗ ಹಾಲಿನ ದರ ಏರಿಕೆ ಮಾಡಿದ್ದಾರೆ. ಹನಿ ನೀರಾವರಿ ಪದ್ದತಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಬ್ಸಿಡಿ ಇತ್ತು. 48 ಪರ್ಸೆಂಟ್ ಇದ್ದ ಸಬ್ಸಿಡಿಯನ್ನು 18 ಪರ್ಸೆಂಟ್ ಗೆ ಇಳಿಸಿದ್ದಾರೆ. ಇವರು ರೈತರಿಗೆ ಎಷ್ಟು ಪ್ರೋತ್ಸಾಹ ಕೊಡುತ್ತಿದ್ದಾರೆ ಎಂದು ಇದರಿಂದಲೇ ಗೊತ್ತಾಗುತ್ತದೆ ಎಂದು ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ನಮ್ಮ ಪಕ್ಷದ ಶಾಸಕರು, ನನಗೆ ನೀಡಿದ್ದು, ಈ ಬಗ್ಗೆ ಪಕ್ಷದ ರಾಷ್ಟಿçÃಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜುಲೈ ೧೫ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಶಾಸಕರ ಜತೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅವರ ಅಭಿಪ್ರಾಯ ಸಂಗ್ರಹಿಸಲಾಯಿತು. ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಶಾಸಕರು ನನಗೆ ಅಧಿಕಾರ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಇಂದಿನ ಶಾಸಕಾಂಗ ಪಕ್ಷ ಹಾಗೂ ರ್ಕೋ ಕಮಿಟಿ ಸಭೆಗಳಲ್ಲಿ ಹಲವಾರು ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಪಕ್ಷವನ್ನು ತಳಮಟ್ಟದಿಂದ ಮರು ಸಂಘಟನೆ ಮಾಡುವುದು, ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ನಡೆಸುವುದು, ವಿಧಾನ ಕಲಾಪದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ಸೇರಿ ಜನಪರವಾಗಿ ಹೋರಾಟ ನಡೆಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಅತ್ಯಂತ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು. ಹೊಸ ರಾಜ್ಯಾಧ್ಯಕ್ಷರ ಚುನಾವಣೆಯೂ ನಡೆಯಲಿದೆ. ಸದಸ್ಯತ್ವ ಅಭಿಯಾನಕ್ಕೆ ರಾಜ್ಯದ 31 ಜಿಲ್ಲೆಗಳಲ್ಲಿನ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರಿಗೆ ಉಸ್ತುವಾರಿ ಕೊಡಲಾಗುವುದು. ಕೋರ್ ಕಮಿಟಿ ಸದಸ್ಯರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಎಲ್ಲರೂ ಈ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಬೇಕು. ಈ ಮೂಲಕ ನಾವು ಜೆಡಿಎಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವನ್ನಾಗಿ ರೂಪಿಸುತ್ತೇವೆ ಎಂದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿ ಒಳ್ಳೆಯ ಫಲಿತಾಂಶ ತಂದುಕೊಟ್ಟಿದ್ದಾರೆ. ಇವರೆಲ್ಲರ ಶ್ರಮ, ಮಂಡ್ಯ ಜನತೆಯ ಆಶೀರ್ವಾದದಿಂದ ಕೇಂದ್ರ ಸದುವನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಅದಕ್ಕೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ನಾಯಕರು, ಶಾಸಕರ ಜತೆ ಚರ್ಚೆ ಮಾಡಿದ್ದೇನೆ ಎಂದು ಅವರು ಹೇಳಿದರು.
ಇದಕ್ಕೂ ಮೊದಲು ನಡೆದ ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೊರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂಯರ್ ನಾಯಕ್ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.