ಮಾಲೂರು ತಾಲೂಕಿನಲ್ಲಿ ಮರೆಯಾದ ಸ್ವಚ್ಛತೆ
1 min readಮಾಲೂರು ತಾಲೂಕಿನಲ್ಲಿ ಮರೆಯಾದ ಸ್ವಚ್ಛತೆ
ಪುರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ ಅಸ್ವಚ್ಛತೆ ತಾಂಡವ
ಕಣ್ಣು ಮುಚ್ಚಿ ಕುಳಿತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು
ಶಾಸಕರೂ ಜಾಣ ಮೌನಕ್ಕೆ ಶರಣು, ಜನರ ಆಕ್ರೋಶ
ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಹರಡಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಗ್ರಾಮ ಪಂಚಾಯ್ತಿ ಮತ್ತು ಆರೋಗ್ಯಾಧಿಕಾರಗಳು ಕಣ್ಣಿದ್ದು ಕುರುಡರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ಶಾಸಕರು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡದೆ ಜಾಣ ಮೌನ ವಹಿಸಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಹರಡಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಗ್ರಾಮ ಪಂಚಾಯ್ತಿ ಮತ್ತು ಆರೋಗ್ಯಾಧಿಕಾರಗಳು ಕಣ್ಣಿದ್ದು ಕುರುಡರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ಶಾಸಕರು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡದೆ ಜಾಣ ಮೌನ ವಹಿಸಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಲೂರು ತಾಲ್ಲೂಕಿನ ಪ್ರತಿ ಗ್ರಾಮದಲ್ಲಿ ಪಟ್ಟಣದ ಪುರಸಭೆಯಲ್ಲಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದ್ದು, ಚರಂಡಿಗಳಲ್ಲಿ ಹೂಳು ತುಂಬಿ ಗಬ್ಬು ನಾರುತ್ತಿದೆ. ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು ಗ್ರಾಮ ಪಂಚಾಯ್ತಿ ಅಧಿಕಾರಿಗಳು ಮಾತ್ರ ಗಾಢ ನಿದ್ರೆಗೆ ಜಾರಿದ್ದಾರೆ,
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಡೆಂಘೀ ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ರೋಗಿಗಳು ಪ್ರತಿನಿತ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಲೆದಾಡುತ್ತಿದ್ದಾರೆ. ಅಲ್ಲದೆ ತಾಲ್ಲೂಕು ಆರೋಗ್ಯಾಧಿಕಾರಿ ಗ್ರಾಮಗಳಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ಹರಡದಂತೆ ಅರಿವು ಸಹ ಮೂಡಿಸುವ ಕೆಲಸವನ್ನೂ ಮಾಡುತ್ತಿಲ್ಲ. ಪುರಸಭೆ ಸೇರಿದಂತೆ ತಾಲ್ಲೂಕಿನಲ್ಲಿರುವ ೨೮ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಮೂಲ ಸೌಕರ್ಯ ಮರೀಚಿಕೆ ಯಾಗಿದೆ.
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನೆಪಕ್ಕೆ ಮಾತ್ರ ಹಣ ವ್ಯಯ ಮಾಡಿ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗೆ ಈ ಸಂಬAಧ ದೂರು ಸಲ್ಲಿಸಿದರೂಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮೀಣ ಜನರು ಅಳವತ್ತುಕೊಂಡಿದ್ದಾರೆ. ಇನ್ನಾದರೂ ಪುರಸಭೆ ಮತ್ತು ಗ್ರಾಮ ಪಂಚಾಯ್ತಿ ಅಧಿಕಾರಿಗಳು ಆರೋಗ್ಯದ ದೃಷ್ಟಿಯಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾರ್ಯಕ್ಕೆ ಮುಂದಾಗ್ತಾರ ಕಾದು ನೋಡಬೇಕಿದೆ.