ನಂಜನಗೂಡಿನಲ್ಲಿ ನೀಲಿ ಬಾವುಟಗಳ ಅಬ್ಬರ
1 min readನಂಜನಗೂಡಿನಲ್ಲಿ ನೀಲಿ ಬಾವುಟಗಳ ಅಬ್ಬರ
ಅದ್ದೂರಿ ಅಂಬೇಡ್ಕರ್ ಜಯಂತ್ಯುತ್ಸವ
ನoಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ತಾಲ್ಲೂಕಿನ ಅಂಬೇಡ್ಕರ್ ಯುವ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳಿoದ ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ತಾಲ್ಲೂಕಿನ ಅಂಬೇಡ್ಕರ್ ಯುವ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳಿoದ ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಂಜನಗೂಡು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂಬೇಡ್ಕರ್ ಭಾವಚಿತ್ರದ ಬೆಳ್ಳಿರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ದರ್ಶನ್ ಧ್ರುವ ನಾರಾಯಣ್ ವಿಧಾನಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗಿಯಾಗಿ, ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ನಂಜನಗೂಡಿನ ಆರ್‌ಪಿ ರಸ್ತೆ ಮೂಲಕ ಶ್ರೀ ನಂಜುoಡೇಶ್ವರ ಸ್ವಾಮಿ ದೇವಾಲಯದವರೆಗೆ ಮೆರವಣಿಗೆ ಜೈ ಭೀಮ್ ಜೈ ಭೀಮ್ ಎಂದು ಜೈ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಸ್ತಬ್ಧ ಚಿತ್ರ, ಸಂವಿಧಾನದ ಪೀಠಿಕೆ ಮತ್ತು ಅಂಬೇಡ್ಕರ್ ಸಂದೇಶವುಳ್ಳ ಸ್ತಬ್ಧಚಿತ್ರ, ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಸ್ತಬ್ಧ ಚಿತ್ರ, ಬಾಲ್ಯ ವಿವಾಹದ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆದವು. ಮೆರವಣಿಯ ಉದ್ದಕ್ಕೂ, ಮಂಗಳವಾದ್ಯ ಮತ್ತು ನಗಾರಿ ತಮಟೆಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆಯಲ್ಲಿ ಭಾಗವಹಿಸಿದರು.
ದಲಿತ ಸಂಘಟನೆಗಳ ಮುಖಂಡರು ಮತ್ತು ಸಾಕಷ್ಟು ಯುವಕರು ನೀಲಿ ಬಾವುಟಗಳನ್ನು ಪ್ರದರ್ಶನ ಮಾಡಿ ಅಂಬೇಡ್ಕರ್ ಸ್ಲೋಗನ್ ಕೂಗಿ ಹರ್ಷ ವ್ಯಕ್ತಪಡಿಸಿದರು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಸೇರಿದಂತೆ ಸುಮಾರು 5 ಸಾವಿರಕ್ಕೂ ಅಧಿಕ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.