ಗೌರಿಬಿದನೂರು ತಾಲೂಕಿನಾಧ್ಯಂತ ಸಂಭ್ರಮದ ಕ್ರಿಸ್ಮಸ್

ಬಾಗೇಪಲ್ಲಿಯಲ್ಲಿ ಮುಗಿಲು ಮುಟ್ಟಿದ ಕ್ರಿಸ್ ಮಸ್ ಸಂಭ್ರಮ

ಬಾಗೇಪಲ್ಲಿಯಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕ್ರಿಸ್‌ಮಸ್ ಸಂಭ್ರಮ

December 26, 2024

Ctv News Kannada

Chikkaballapura

ಎಚ್ಚೆತ್ತುಕೊಂಡ ಜಿಟಿ ಮಾಲ್‌ : ಪಂಚೆ ಧರಿಸಿ ಬಂದ ರೈತನಿಗೆ ಸನ್ಮಾನ

1 min read

ಪಂಚೆ ಧರಿಸಿದ್ದಾರೆಂಬ ಒಂದೇ ಕಾರಣಕ್ಕಾಗಿ ಮಾಲ್‌ನೊಳಗೆ ಬಿಡದೆ ರೈತನಿಗೆ ಅಪಮಾನ ಮಾಡಿದ್ದ ಮಾಲ್‌ನವರು ಎಚ್ಚೆತ್ತುಕೊಂಡು ಸನ್ಮಾನಿಸಿದ ಅಪರೂಪದ ಘಟನೆ ನಗರದಲ್ಲಿ ನಡೆದಿದೆ.

ಮಂಗಳವಾರ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಿಸಲು ಆಗಮಿಸಿತ್ತು.

ಇದೇ ವೇಳೆ ಅವರ ಜೊತೆಗೆ ಫಕೀರಪ್ಪ ಎಂಬ ರೈತರು ಕೂಡ ಬಂದಿದ್ದರು.

ಸೆಕ್ಯುರಿಟಿ ಗಾರ್ಡ್‌ಗಳು, ಪಂಚೆ ಉಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಮಾಲ್‌ ಒಳಗೆ ಬಿಡದೆ ಅವಮಾನಿಸಿ ಹೊರಗೆ ಕಳುಹಿಸಿದ್ದರು. ಇದನ್ನು ಅವರ ಪುತ್ರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಇದಕ್ಕೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ ಅನೇಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಲ್‌ನವರು ಕೂಡಲೇ ರೈತನ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಮಾಲ್‌ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದ್ದರು.

ಕುರುಬೂರು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರು ಈ ಘಟನೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ, ಇಂಥ ಘಟನೆಯ ಮೂಲಕ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಖಂಡಿಸಿದ್ದಾರೆ. ಕೂಡಲೇ ಮಾಲ್‌ ಮಾಲೀಕರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕ್ಷಮೆ ಯಾಚನೆ: ನಿನ್ನೆಯ ಅವಾಂತರದ ನಂತರ ಎಚ್ಚೆತ್ತುಕೊಂಡ ಮಾಲ್‌ ಸಿಬ್ಬಂದಿ ಇಂದು ಪಂಚೆ ಉಟ್ಟವರನ್ನು ಒಳಗೆ ಬಿಡುತ್ತಿರುವುದಷ್ಟೇ ಅಲ್ಲ, ಪಂಚೆ ಉಟ್ಟವರಿಗೆ ಕೈಮುಗಿದು ಬರಮಾಡಿಕೊಳ್ಳುತ್ತಿದ್ದಾರೆ!

About The Author

Leave a Reply

Your email address will not be published. Required fields are marked *