ಚಿಕ್ಕತಿರುಪತಿ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ
1 min readಚಿಕ್ಕತಿರುಪತಿ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ
ತುಂತುರು ಮಳೆಯನ್ನೂ ಲೆಕ್ಕಿಸಿದ ಹರಿದು ಬಂದ ಭಕ್ತ ಸಾಗರ
ಅರಸೀಕೆರೆ ತಾಲೂಕಿನ ಚಿಕ್ಕ ತಿರುಪತಿ ಮಾಲೆಕಲ್ಲು ಅಮರಗಿರಿ ಲಕ್ಷ್ಮಿ ವೆಂಕಟರಮಣ ಸ್ವಾಮಿ ಮಹಾ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವೋಪೇತವಾಗಿ ಜರುಗಿತು.
ಅರಸೀಕೆರೆ ತಾಲೂಕಿನ ಚಿಕ್ಕ ತಿರುಪತಿ ಮಾಲೆಕಲ್ಲು ಅಮರಗಿರಿ ಲಕ್ಷ್ಮಿ ವೆಂಕಟರಮಣ ಸ್ವಾಮಿ ಮಹಾ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವೋಪೇತವಾಗಿ ಜರುಗಿತು. ಮುಗಿಲು ಮುಟ್ಟಿದ ಗೋವಿಂದ ನಾಮ ಸ್ಮರಣೆಯೊಂದಿಗೆ ಮೋಡ ಕವಿದ ವಾತಾವರಣದಲ್ಲಿ ಸುರಿಯುತ್ತಿದ್ದ ತುಂತುರು ಮಳೆಯ ನಡುವೆ ಮುಂಜಾನೆಯಿoದಲೇ ದೇವಾಲಯದ ಕಡೆಗೆ ಆಗಮಿಸಿದ ಅಪಾರ ಭಕ್ತ ರು ಶ್ರೀ ದೇವಿ ಸಮೇತ ಗೋವಿಂದರಾಜ ಸ್ವಾಮಿಯ ದರ್ಶನ ಪಡೆದರು.
ಆಷಾಢಮಾಸದ ದ್ವಾದಶಿಯಂದು ನಡೆಯುವ ಜಾತ್ರಾ ಮಹೋತ್ಸವ ಇದಾಗಿದ್ದು, ನಾಡಿನ ವಿವಿಧ ಕಡೆಗಳಿಂದ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತರು ಆಗಮಿಸುವುದು ವಾಡಿಕೆ. ವಿಶೇಷವಾಗಿ ನೂತನ ವಧು-ವರರು ಬೆಟ್ಟದ ಮೇಲೆ ನೆಲೆಸಿರುವ ಪದ್ಮಾವತಿ ಸಮೇತ ವೆಂಕಟರಮಣನ ದರ್ಶನ ಮಾಡಿ, ನಂತರ ರಥೋತ್ಸವದಲ್ಲಿ ಪಾಲ್ಗೊಂಡರೆ ಮನದ ಇಷ್ಟಾರ್ಥ ಈಡೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿ ಇರುವುದಿರಂದ ಇಲ್ಲಿನ ರಥೋತ್ಸವದಲ್ಲಿ ನೂತನ ವಧು ವರರು ಹೆಚ್ಚಾಗಿ ಕಾಣುವುದು ವಿಶೇಷ.
ಮಧ್ಯಾಹ್ನ 1.30ರ ಸುಮಾರಿಗೆ ತುಂತುರು ಮಳೆಯ ನಡುವೆಯೂ ಸಿಂಗರಿಸಿದ ರಥದ ಮಂಟಪದಲ್ಲಿ ಶ್ರೀದೇವಿ ಭೂದೇವಿ ಸಮೇತ ವೆಂಕಟರಮಣ ಸ್ವಾಮಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ, ಮಹಾ ಮಂಗಳಾರತಿ ಬೆಳಗುತ್ತಿದ್ದಂತೆಯೇ ಈ ಶುಭ ಘಳಿಗೆಗಾಗಿ ಕಾಯುತ್ತಿದ್ದ ಭಕ್ತವೃಂದ, ಗೋವಿಂದ ನಾಮಸ್ಮರಣೆಯೊಂದಿಗೆ ರಥ ಎಳೆದರು. ರಥೋತ್ಸವ ವೇಳೆ ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ, ತಹಸೀಲ್ದಾರ್ ಸಂತೋಷ್ ಕುಮಾರ್ ಸೇರಿದಂತೆ ದೇವಾಲಯದ ವ್ಯವಸ್ಥಾಪನಾ ಹಾಗೂ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು,ಭಾಗವಹಿಸಿದ್ದರು.