ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
1 min readದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ದೊಡ್ಡಬಳ್ಳಾಪುರದ ಕನ್ನಡಿಗರ ಕರವೇ ನೇತೃತ್ವದಲ್ಲಿ ವಿತರಣೆ
ಸಂಘಟನೆಗಳು ಜನಸ್ನೇಹಿಯಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿಶಿಷ್ಟವಾಗಿ ಕಾರ್ಯನಿರ್ವಹಿಸುವ ಅವಕಾಶ ಇದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಹೇಳಿದರು.
ಸಂಘಟನೆಗಳು ಜನಸ್ನೇಹಿಯಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿಶಿಷ್ಟವಾಗಿ ಕಾರ್ಯನಿರ್ವಹಿಸುವ ಅವಕಾಶ ಇದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಹೇಳಿದರು. ದೊಡ್ಡಬಳ್ಳಾಪುರ ನಗರದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ದಿನಪತ್ರಿಕೆ ಹಂಚುವ ಮಕ್ಕಳಿಗೆ ಪುಸ್ತಕ, ಲೇಖನ ಪರಿಕರಗಳ ವಿತರಣೆ ಕಾರ್ಯಕ್ರಮ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸ್ಥೆಯ ಮೂಲಕ ನಿತ್ಯ ದಾಸೋಹ ಸೇವೆ ನಿರಂತರವಾಗಿ ನಡೆಯುತ್ತಿದ್ದು, ಹಲವು ದಾನಿಗಳು ಇದಕ್ಕೆ ಕೈಜೋಡಿಸಿದ್ದಾರೆ. ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೋಟ್ ಪುಸ್ತಕ ಹಾಗೂ ಲೇಖನ ಪರಿಕರಗಳನ್ನು ವಿತರಿಸಲಾಗುತ್ತಿದೆ. ನಿತ್ಯದ ಸುದ್ದಿಗಳನ್ನು ಜನತೆಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಎಷ್ಟು ಗಣನೀಯವೋ ಅದೇ ರೀತಿಯಲ್ಲಿ ಸುದ್ದಿಪತ್ರಿಕೆ ಹಂಚುವ ವಿತರಕರು ಹಾಗೂ ಮನೆಮನೆಗೆ ತಲುಪಿಸುವ ಮಕ್ಕಳ ಕೊಡುಗೆಯೂ ಅಪಾರ ಎಂದರು.
ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್, ಮೆಳೇಕೋಟೆಯ ವೈದ್ಯಾಧಿಕಾರಿ ಡಾ.ಅರುಣ್‌ಕುಮಾರ್, ಮಕ್ಕಳ ತಜ್ಞ ವೈದ್ಯ ಡಾ.ಸುಭಾಶ್ ಶಿಂಪಿಗೇರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ ಉಪ್ಪಾರ, ಶಿಕ್ಷಕಿ ಜಿ.ರೂಪಶ್ರೀ, ಕುಸ್ತಿ ತರಬೇತುದಾರ ಪೈಲ್ವಾನ್ ಚೌಡಪ್ಪ ಅವರನ್ನು ಸನ್ಮಾನಿಸಲಾಯಿತು